ಹೊಸದಾಗಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಪ್ರಶಾಂತರಾವ್ ಎಂ ವಿ
ಶಿರಹಟ್ಟಿ ತಾಲೂಕು ಪಂಚಾಯತಿ ಪ್ರಭಾರಿ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನಿಂಗಪ್ಪ ಓಲೆಕಾರರನ್ನು ಪಶುವೈದ್ಯಕೀಯ ಆಸ್ಪತ್ರೆಗೆ ವರ್ಗಾವಣೆ ಮಾಡಲಾಗಿದೆ. ತಾಲೂಕು ಪಂಚಾಯಿತಿಗೆ ಹೊಸದಾಗಿ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಪ್ರಶಾಂತ್ ರಾವ್ ಅಧಿಕಾರವನ್ನು ವಹಿಸಿಕೊಂಡಿದ್ದಾರೆ.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ವರ್ಗಾವಣೆ ಆದೇಶ ಹೊರಡಿಸಲಾಗಿದೆ. ಶಿರಹಟ್ಟಿ ತಾಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಉಡುಪಿ ಜಿಲ್ಲಾ ಪಂಚಾಯತ್ ಸಹಾಯಕ ಕಾರ್ಯದರ್ಶಿಯಾದ ಪ್ರಶಾಂತ್ ರಾವ್ ಎಂ ವಿ ನೇಮಕಗೊಂಡು ಕರ್ತವ್ಯವನ್ನು ಮುಂದುವರಿಸಿದ್ದಾರೆ.
ವರದಿ: ವೀರೇಶ್ ಗುಗ್ಗರಿ
Tags
ಟಾಪ್ ನ್ಯೂಸ್