Prajwal Revanna Arrest : ಕೊನೆಗೂ 34 ದಿನಗಳ ನಂತರ ಪೊಲೀಸರಿಗೆ ಸಿಕ್ಕಿಬಿದ್ದ ಅತ್ಯಾಚಾರ ಆರೋಪಿ ಪ್ರಜ್ವಲ್ ರೇವಣ್ಣ


ಹಾಸನದಲ್ಲಿ ನೂರಾರು ಮಹಿಳೆಯರ ಮೇಲೆ ಅತ್ಯಾಚಾರ ಮಾಡಿದ್ದಾರೆನ್ನಲಾದ ಆರೋಪಿ ಸಂಸದ ಪ್ರಜ್ವಲ್ ರೇವಣ್ಣ (Hassan MP Prajwal Revanna) ವಿದೇಶಕ್ಕೆ ಹೋಗಿ ತಲೆಮರೆಸಿಕೊಂಡಿದ್ದು, ಕೊನೆಯೂ 34 ದಿನಗಳ ನಂತರ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಜರ್ಮನಿಯ ಮ್ಯೂನಿಚ್‌ನಿಂದ ಬೆಂಗಳೂರು ವಿಮಾನ (Munich to Bengaluru flight) ನಿಲ್ದಾಣಕ್ಕೆ ಮಧ್ಯರಾತ್ರಿ 12.48ಕ್ಕೆ ಆಗಮಿಸಿದ ಬೆನ್ನಲ್ಲಿಯೇ ವಿಶೇಷ ತನಿಖಾ ತಂಡ (Special investigation Team -SIT) ಪೊಲೀಸರು ಬಂಧಿಸಿದ್ದಾರೆ


ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಇಳಿದ ಪ್ರಜ್ವಲ್ ರೇವಣ್ಣ ಅವರನ್ನು ವಿವಿಐಪಿ ಗೇಟ್‌ನಲ್ಲಿಯೇ ಬಂಧಿಸಿದ ಎಸ್‌ಐಟಿ ಪೊಲೀಸರು ಅಲ್ಲಿಂದ ಬೆಂಗಳೂರಿನತ್ತ ಹೊರಡಲು ಅನುಕೂಲ ಆಗುವಂತೆ ಟ್ರಾಫಿಕ್ ಪೊಲೀಸರೊಂದಿಗೆ ಸಂಪರ್ಕ ಸಾಧಿಸಿ ಎಲ್ಲಿಯೂ ಟ್ರಾಫಿಕ್ ಆಗಂದತೆ ವಾಹನಗಳನ್ನು ತೆರವು ಮಾಡಲಾಗಿದೆ. ಇದಕ್ಕಾಗಿ ಎಸ್‌ಐಟಿ ಮುಖ್ಯಸ್ಥ ಬಿಕೆ ಸಿಂಗ್‌ ಅವರು ಬೆಂಗಳೂರು ಪೊಲೀಸ್‌ ಕಮಿಷನರ್‌ ಬಿ. ದಯಾನಂದ್‌ ಅವರೊಂದಿಗೆ ಚರ್ಚೆ ನಡೆಸಿ ಬೆಂಗಳೂರಿಗೆ ಕರೆತರಲು ವ್ಯವಸ್ಥೆ ಮಾಡಿಕೊಂಡಿದ್ದಾರೆ.

ಇನ್ನು ಹಾಸನ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಮೂರು ಅತ್ಯಾಚಾರ ಪ್ರಕರಣಗಳು ಸಂಸದ ಪ್ರಜ್ವಲ್ ರೇವಣ್ಣ ಮೇಲೆ ದಾಖಲಿಸಲಾಗಿದೆ. ಇನ್ನು ಪ್ರಜ್ವಲ್ ವಿರುದ್ಧ ಲುಕ್ ಔಟ್ ಜಾರಿ ಮಾಡಿರುವ ಹಿನ್ನೆಲೆಯಲ್ಲಿ ಕೂಡಲೇ ಅವರನ್ನು ವಿಮಾನ ನಿಲ್ದಾಣದ ಸಿಬ್ಬಂದಿ ಗುರುತಿಸಿ ಎಸ್‌ಐಟಿ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಬೆಂಗಳೂರು ಎಸ್‌ಐಟಿ ಪೊಲೀಸರು ಕೂಡ ವಿಮಾನ ನಿಲ್ದಾಣದೊಳಗೆ ಹೋಗಿ ಸಿಐಎಸ್‌ಎಫ್‌ ಪೊಲೀಸರ ನೆರವಿನಿಂದ ಪ್ರಜ್ವಲ್‌ ರೇವಣ್ಣನನ್ನು ಬಂಧಸಿದ್ದಾರೆ.

ಮೊದಲು ವೈದ್ಯಕೀಯ ಪರೀಕ್ಷೆ: ವಿದೇಶದಿಂದ ಆಗಮಿಸಿದ ಪ್ರಜ್ವಲ್‌ನಲ್ಲಿ ಬಂಧಿಸಿದ ಪೊಲೀಸರು ಅವರನನ್ನು ಮೊದಲು ಸರ್ಕಾರಿ ಆಸ್ಪತ್ರೆಗಳಲ್ಲಿ ಒಂದಾದ ಬೌರಿಂಗ್ ಆಸ್ಪತ್ರೆ ಅಥವಾ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ಮಾಡಿಸಿ ನಂತರ ವಶಕ್ಕೆ ಪಡೆಯುತ್ತಾರೆ. ಇದಾದ ನಂತರ ನಾಳೆ ಬೆಳಗ್ಗೆವರೆಗೆ ಇರಿಸಿಕೊಳ್ಳಲು ಇಮಿಗ್ರೇಷನ್ ಸೆಂಟರ್‌ಗೆ ಕರೆದೊಯ್ಯುತ್ತಾರೆ. ಬೆಳಗ್ಗೆ ಅವರನ್ನು ಕೆಲಹೊತ್ತು ವಿಚಾರಣೆಯನ್ನೂ ಮಾಡಲಿದ್ದಾರೆ. ಜೊತೆಗೆ, ನಾಳೆ ಸಂಜೆಯೊಳಗೆ ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ.

ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ: ಪ್ರಜ್ವಲ್ ರೇವಣ್ಣ ವಿದೇಶದಿಂದ ಬರುವ ಮುನ್ನವೇ ಕಳೆದ ಎರಡು ದಿನಗಳ ಹಿಂದೆಯೇ ಪೊಲೀಸರಿಂದ ಬಂಧನಕ್ಕೆ ಒಳಗಾಗದ ರೀತಿಯಲ್ಲಿ ನಿರೀಕ್ಷಣಾ ಜಾಮೀನು ಪಡೆಯಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದರು. ಆದರೆ, ಈ ಅರ್ಜಿ ವಿಚಾರಣೆ ಮಾಡಿದ್ದ ನ್ಯಾಯಾಧೀಶರು ಪ್ರಜ್ವಲ್ ರೇವಣ್ಣನ ಜಾಮೀನು ಅರ್ಜಿಯನ್ನು ತಿರಸ್ಕರಿಸಿ ಮೇ 31ಕ್ಕೆ ವಿಚಾರಣೆ ಮುಂದೂಡಿಕೆ ಮಾಡಿತ್ತು. ಈ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ ಮತ್ತೊಮ್ಮೆ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಕೈಗೆತ್ತಿಕೊಳ್ಳಲಾಗುತ್ತದೆ.

Previous Post Next Post

AD

 


Siddi TV

Contact Form

f="https://unpkg.com/video.js/dist/video-js.css" rel="stylesheet">