Ballari SP : ಬಳ್ಳಾರಿಗೆ ಜಿಲ್ಲೆಗೆ ಆಗಮಿಸುತ್ತಿರುವ ಮೊದಲ ಮಹಿಳಾ ಐಪಿಎಸ್ ಅಧಿಕಾರಿ


ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಗೆ ನೂತನ ಎಸ್ ಪಿ ಶೋಭಾ ರಾಣಿ ವಿ.ಜೆ. ಅವರನ್ನು ನಿಯೋಜಿಸಿ ರಾಜ್ಯ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ. ಈ ಮೂಲಕ ಬಳ್ಳಾರಿಗೆ ಜಿಲ್ಲೆಗೆ ಆಗಮಿಸುತ್ತಿರುವ ಮೊದಲ ಮಹಿಳಾ ಐಪಿಎಸ್ ಅಧಿಕಾರಿಯಾಗಿದ್ದಾರೆ.

ಬಳ್ಳಾರಿ ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಎಸ್ ಪಿಯಾಗಿ ಕಾರ್ಯನಿರ್ವಹಿಸಿದ್ದ ರಂಜಿತ್ ಕುಮಾರ್ ಬಂಡಾರು ಅವರನ್ನು ವರ್ಗಾವಣೆ ಮಾಡಿರುವ ರಾಜ್ಯ ಸರ್ಕಾರ ತೆರವಾಗಿದ್ದ ಸ್ಥಾನಕ್ಕೆ ಬೆಂಗಳೂರಿನ ಮೆಟ್ರೋಪಾಲಿಟನ್ ಟಾಸ್ಕ್ ಫೋರ್ಸ್ ಎಸ್ ಪಿ ಯಾಗಿ ಕಾರ್ಯನಿರ್ವಹಿಸುತ್ತಿದ್ದ ಶೋಭಾರಾಣಿ ವಿ.ಜೆ. ಅವರನ್ನು ಬಳ್ಳಾರಿ ಎಸ್ ಪಿಯಾಗಿ ನಿಯೋಜಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ಬಳ್ಳಾರಿ ಜಿಲ್ಲೆಗೆ ಪೊಲೀಸ್ ವರಿಷ್ಠಾಧಿಕಾರಿಯಾಗಿ ಆಗಮಿಸುತ್ತಿರುವ ಮೊದಲ ಮಹಿಳಾ ಐಪಿಎಸ್ ಅಧಿಕಾರಿಯಾಗಿದ್ದಾರೆ.


Previous Post Next Post

Contact Form

f="https://unpkg.com/video.js/dist/video-js.css" rel="stylesheet">