ದೆಹಲಿಯ ಕರ್ನಾಟಕ ಭವನದ ನೌಕರನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ
ಬಳ್ಳಾರಿ: ದೆಹಲಿಯ ಕರ್ನಾಟಕ ಭವನದ (Delhi Karnataka Bhavan) ನೌಕರನ ಶವ ನೇಣು ಬಿಗಿದ ಸ್ಥಿತಿಯಲ್ಲಿ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಖಾನಾ ಹೊಸಳ್ಳಿ ಹೊರವಲಯದಲ್ಲಿ ಪತ್ತೆಯಾಗಿದೆ.
ಎಂ ಬಿ ಅಯ್ಯನಹಳ್ಳಿ ಗ್ರಾಮದ ಮಾರುತಿ(35) ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮಾರುತಿ ದೆಹಲಿಯ ಕರ್ನಾಟಕ ಭವನದಲ್ಲಿ ಅಡುಗೆ ವಿಭಾಗದಲ್ಲಿ (Kitchen Department) ಕೆಲಸ ಮಾಡುತ್ತಿದ್ದರು.
ಪತ್ನಿ ಹಾಗೂ ಮಕ್ಕಳನ್ನು ಪತ್ನಿಯ ತವರು ಮನೆಗೆ ಬಿಟ್ಟು ತಂದೆ, ತಾಯಿಯನ್ನು ನೋಡಿಕೊಂಡು ಬರುವೆ ಎಂದು ಮಾರುತಿ ಮೂರು ದಿನಗಳ ಹಿಂದೆ ದೆಹಲಿಯಿಂದ ಸ್ವಗ್ರಾಮ ಅಯ್ಯನಹಳ್ಳಿಗೆ ಬಂದಿದ್ದರು.
ಮಂಗಳವಾರ ಸಂಜೆ ಕಾನಾಹೊಸಳ್ಳಿ ಹೊರವಲಯದ ಹುಣಸೆ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಪತ್ನಿ ನೀಡಿದ ದೂರಿನ ಆಧಾರದ ಮೇಲೆ ಕಾನಾಹೊಸಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು ವರದಿ ಬರಬೇಕಿದೆ.