Ballari : ರೈತರಿಂದ ಕೃಷಿ ಪ್ರಶಸ್ತಿಗೆ ಅರ್ಜಿ ಆಹ್ವಾನ

ರೈತರಿಂದ ಕೃಷಿ ಪ್ರಶಸ್ತಿಗೆ ಅರ್ಜಿ ಆಹ್ವಾನ

ಬಳ್ಳಾರಿ :ಕೃಷಿ ಇಲಾಖೆ ವತಿಯಿಂದ ಪ್ರಸ್ತಕ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮಿನ ಬೆಳೆ ಸ್ಪರ್ಧೆ ಕಾರ್ಯಕ್ರಮದಡಿ ಕೃಷಿ ಪ್ರಶಸ್ತಿಗೆ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕ ಡಾ.ಕೆ.ಸೋಮಸುಂದರ್ ಅವರು ತಿಳಿಸಿದ್ದಾರೆ.

ಕೃಷಿ ಇಲಾಖೆಯ ಕೆ-ಕಿಸಾನ್ ಪೋರ್ಟಲ್‌ನಲ್ಲಿ ನೂತನವಾಗಿ ಕೃಷಿ ಪ್ರಶಸ್ತಿಗೆ ಅರ್ಜಿ ನಮೂನೆಯನ್ನು ಆಳವಡಿಸಲಾಗಿದ್ದು, ಸಿಟಿಜನ್ ಲಾಗಿನ್ ಅಥವಾ ಆರ್‌ಎಸ್‌ಕೆ ಲಾಗಿನ್ ಮೂಲಕ ಹತ್ತಿರದ ರೈತ ಸಂಪರ್ಕ ಕೇಂದ್ರ, ಸೇವಾ ಕೇಂದ್ರ ಅಥವಾ ಸ್ವತಃ ಕೆ-ಕಿಸಾನ್ ಪೋರ್ಟಲ್‌ನಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ತಮ್ಮ ಎಫ್‌ಐಡಿ ಬಳಸಿಕೊಂಡು ಅರ್ಜಿ ಸಲ್ಲಿಸಬೇಕು. ಅರ್ಜಿ ಶುಲ್ಕವಿರುವುದಿಲ್ಲ.

ಮುಂಗಾರು ಹಂಗಾಮಿನ ಕೃಷಿ ಪ್ರಶಸ್ತಿಗೆ ಆ.31 ನೋಂದಾಯಿಸಲು ಕೊನೆಯ ದಿನ ಮತ್ತು ಹಿಂಗಾರು ಹಂಗಾಮಿನ ಕೃಷಿ ಪ್ರಶಸ್ತಿಗೆ ನವೆಂಬರ್ 30 ಕೊನೆಯ ದಿನವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರ ಕಚೇರಿ ಅಥವಾ ದೂ.08392-276224 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

------


Previous Post Next Post

Contact Form

f="https://unpkg.com/video.js/dist/video-js.css" rel="stylesheet">