Missing : ಹೊಸ ದರೋಜಿ ಗ್ರಾಮದ ವ್ಯಕ್ತಿ ಕಾಣೆ; ಪತ್ತೆಗೆ ಮನವಿ


ವ್ಯಕ್ತಿ ಕಾಣೆ; ಪತ್ತೆಗೆ ಮನವಿ

ಬಳ್ಳಾರಿ : ಸಂಡೂರು ತಾಲ್ಲೂಕಿನ ಹೊಸ ದರೋಜಿ ಗ್ರಾಮದ ನಿವಾಸಿ, ಮೇಸ್ತಿçà ಕೆಲಸ ಮಾಡುತ್ತಿದ್ದ ಮಹಮ್ಮದ್ ಶರೀಫ್ ಎನ್ನುವ 40 ವರ್ಷದ ವ್ಯಕ್ತಿ ನಗರದ ಕೆಎಸ್‌ಆರ್‌ಟಿಸಿ ಹೊಸ ಬಸ್ ನಿಲ್ದಾಣದ ಮುಂದಿನ ಗೇಟ್ ಹತ್ತಿರದಿಂದ ಅ.10 ರಂದು ಕಾಣೆಯಾಗಿದ್ದು, ಪತ್ತೆಗೆ ಸಹಕರಿಸಬೇಕೆಂದು ಬ್ರೂಸ್‌ಪೇಟೆ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಅವರು ಮನವಿ ಮಾಡಿದ್ದಾರೆ.

ಕಾಣೆಯಾದ ವ್ಯಕ್ತಿಯ ಚಹರೆ:

ಎತ್ತರ 5.4 ಅಡಿ, ಅಗಲವಾದ ಮುಖ, ಗೋಧಿ ಮೈಬಣ್ಣ, ಕಪ್ಪು ತಲೆಕೂದಲು, ಗಡ್ಡ ಇದ್ದು, ಕನ್ನಡ, ತೆಲುಗು, ಹಿಂದಿ ಭಾಷೆ ಮಾತನಾಡುತ್ತಾನೆ. ವ್ಯಕ್ತಿ ಕಾಣೆಯಾದ ಸಂದರ್ಭದಲ್ಲಿ ಬಿಳಿ ಬಣ್ಣದ ತುಂಬು ತೋಳಿನ ಅಂಗಿ ಹಾಗೂ ನೀಲಿ ಚೆಕ್ಸ್ ಲುಂಗಿ ಧರಿಸಿರುತ್ತಾನೆ.

ಈ ಮೇಲ್ಕಂಡ ಚಹರೆ ಗುರುತುಳ್ಳ ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬ್ರೂಸ್‌ಪೇಟೆ ಪೊಲೀಸ್ ಠಾಣೆಯ ದೂ:08392-272022, ಪಿಐ ಮೊ:9480803045 ಅಥವಾ 9480803081 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

-------

Previous Post Next Post

Contact Form

f="https://unpkg.com/video.js/dist/video-js.css" rel="stylesheet">