Ballari : ನ.12 ರಂದು ಮಿನಿ ಉದ್ಯೋಗ ಮೇಳ


ನ.12 ರಂದು ಮಿನಿ ಉದ್ಯೋಗ ಮೇಳ

ಬಳ್ಳಾರಿ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ನ.12 ರಂದು ಬೆಳಿಗ್ಗೆ 10 ಗಂಟೆಯಿAದ ಮಧ್ಯಾಹ್ನ 02 ಗಂಟೆವರೆಗೆ ನಗರದ ಹಳೆಯ ತಾಲ್ಲೂಕು ಕಚೇರಿ ಆವರಣದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಪಿ.ಎಸ್.ಹಟ್ಟಪ್ಪ ಅವರು ತಿಳಿಸಿದ್ದಾರೆ.

ಮೇಳದಲ್ಲಿ 3 ರಿಂದ 4 ಕಂಪನಿಗಳು ಭಾಗವಹಿಸಲಿದ್ದು, ಇವರು ತಮ್ಮಲ್ಲಿರುವ ಖಾಲಿ ಹುದ್ದೆಗಳಿಗೆ ನೇರ ಸಂದರ್ಶನ ಮೂಲಕ ನೇಮಕ ಮಾಡಿಕೊಳ್ಳುವರು. ಆಸಕ್ತ ಅಭ್ಯರ್ಥಿಗಳು ತಮ್ಮ ಆಧಾರ್‌ಕಾರ್ಡ್ ಪ್ರತಿ ಮತ್ತು ಸ್ವ-ವಿವರಗಳೊಂದಿಗೆ ಅಂದು ನಡೆಯುವ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ಶುಲ್ಕವಿರುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಥವಾ ಮೊ.9742718891, 9663263086, 9900827768, 6360408094 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

----------

Previous Post Next Post

Contact Form

f="https://unpkg.com/video.js/dist/video-js.css" rel="stylesheet">