Hampi: ಹಂಪಿ ಉತ್ಸವಕ್ಕೆ ಮಹೂರ್ತ ಫಿಕ್ಸ್!


Hampi: ಹಂಪಿ ಉತ್ಸವಕ್ಕೆ ಮಹೂರ್ತ ಫಿಕ್ಸ್!

 ಫೆ.28 ರಿಂದ 3 ದಿನ ಉತ್ಸವ ಆಚರಣೆ 

ವಿಶ್ವವಿಖ್ಯಾತ ಹಂಪಿ ಉತ್ಸವ ಆಚರಣೆಗೆ ದಿನಾಂಕ ನಿಗದಿಯಾಗಿದ್ದು, ಫೆ.28 ರಿಂದ ಮೂರು ದಿನಗಳ ಕಾಲ ಅದ್ಧೂರಿಯಾಗಿ ಆಚರಿಸಲು ಸರ್ಕಾರ ತೀರ್ಮಾನಿಸಿದೆ.

ಫೆ.28 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ.ಹಂಪಿಯಲ್ಲಿ ಕಳೆದ ವರ್ಷ ಫೆ.2 ರಿಂದ ಮೂರು ದಿನಗಳ ಕಾಲ ಉತ್ಸವ ಅದ್ದೂರಿಯಾಗಿ ಆಚರಿಸಲಾಗಿತ್ತು. ಈ ವರ್ಷ ಫೆ.28 ರಿಂದ ಮೂರು ದಿನಗಳ ಕಾಲ ಉತ್ಸವ ನಡೆಯಲಿದೆ.ಉತ್ಸವ ಆಚರಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮತಿ ನೀಡಿದ್ದು, ಅದ್ಧೂರಿ ಆಚರಣೆಗೆ ಸೂಚನೆ ನೀಡಿದ್ದಾರೆ. ಉತ್ಸವಕ್ಕೆ ಸಕಲ ಸಿದ್ದತೆ ಮಾಡಿಕೊಳ್ಳಲು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಅವರಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮ್ಮದ್ ಖಾನ್ ತಿಳಿಸಿದ್ದಾರೆ.

Previous Post Next Post

Contact Form

f="https://unpkg.com/video.js/dist/video-js.css" rel="stylesheet">