ಕಂಪ್ಲಿ : ಸ್ವಾಮಿ ವಿವೇಕಾನಂದರ ಜಯಂತಿಯ ಅಂಗವಾಗಿ ಇಂದು ಕೋಟೆಯ ಶ್ರೀ ಸ್ವಾಮಿ ವಿವೇಕಾನಂದ ಶಾಲೆಯಲ್ಲಿ ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಗೌರವ ನಮನ ಸಲ್ಲಿಸಿದ್ದಾರೆ.
ಶಾಲಾ ಮುಖ್ಯಗುರುಗಳಾದ ಬಡಿಗೇರ ಜಿಲಾನಸಾಬ್ ಮಾತನಾಡಿ ಸ್ವಾಮಿ ವಿವೇಕಾನಂದರು ಭಾರತದ ಆಧ್ಯಾತ್ಮಿಕತೆಯ ಸಂದೇಶವನ್ನು ಪಾಶ್ಚಿಮಾತ್ಯ ದೇಶಗಳಲ್ಲಿಯೂ ಪಸರಿಸಿದರು. ವಿವೇಕಾನಂದರ ಹುಟ್ಟುಹಬ್ಬದ ದಿನ ಗೌರವದಿಂದ ನೆನೆಯೋಣ. ಕಠಿಣ ಪರಿಶ್ರಮ ಮತ್ತು ಆತ್ಮವಿಶ್ವಾಸದ ಮೂಲಕ ದೈಹಿಕ ಸವಾಲುಗಳನ್ನು ಮೆಟ್ಟಿನಿಂತು ಕಿರಿಯೇ ವಯಸ್ಸಿನಲ್ಲಿ ವಿಶ್ವ ತಲೆಬಾಗುವಂತಹ ಆಧ್ಯಾತ್ಮಿಕ ಗುರುವಾಗಿ ಬೆಳೆದ ಸ್ವಾಮಿ ವಿವೇಕಾನಂದರ ಬದುಕು ಮತ್ತು ಬರಹ ಯುವ ಸಮುದಾಯಕ್ಕೆ ಸದಾ ಸ್ಪೂರ್ತಿ. ನಾಡಿನ ಸಮಸ್ತ ಯುವ ಸಮುದಾಯಕ್ಕೆ ರಾಷ್ಟ್ರೀಯ ಯುವದಿನದ ಶುಭಾಶಯಗಳು. ವಿವೇಕಾನಂದರನ್ನು ಆರಾಧನೆಗಷ್ಟೇ ಸೀಮಿತವಾಗಿಸದೆ ಅವರ ವಿಚಾರಗಳನ್ನು ಎಲ್ಲರೂ ಅಳವಡಿಸಿಕೊಳ್ಳುವ ಸಂಕಲ್ಪ ಮಾಡೋಣ, ಆ ಮೂಲಕ ದಿವ್ಯ ಚೇತನವನ್ನು ಗೌರವಿಸೋಣ ಎಂದು ತಿಳಿಸಿದರು.
ಜಯಂತಿ ಅಂಗವಾಗಿ ಹಮ್ಮಿಕೊಂಡ ಭಾಷಣ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು. ಈ ಸಂದರ್ಭದಲ್ಲಿ ಶಿಕ್ಷಕಿಯರಾದ ಕೆ ಶ್ವೇತಾ ಉಮಾ ಜೇ ಅಕ್ಷತಾ ವರ್ಷಾ ಮಂಜುಮದಾರ್ ಸುನಿತಾ ಗೌಸಿಯ ಮಣ್ಣೂರ ಲಕ್ಷ್ಮಿ ಆರ್ ಕೆ ಮುಸ್ಕನ್ ಸೇರಿದಂತೆ ವಿದ್ಯರ್ಥಿಗಳು ಪಾಲ್ಗೊಂಡಿದ್ದರು.