Kampli : ಪುರಸಭೆಯ ಸ್ಥಾಯಿ ಸಮಿತಿಯ ನೂತನ ಅಧ್ಯಕ್ಷರಾಗಿ ಎಂ.ಉಸ್ಮಾನ್ ನೇಮಕ

ಕಂಪ್ಲಿ ಪುರಸಭೆಯ ಸ್ಥಾಯಿ ಸಮಿತಿಯ ನೂತನ ಅಧ್ಯಕ್ಷರಾಗಿ ಎಂ.ಉಸ್ಮಾನ್ ನೇಮಕ

ಕಂಪ್ಲಿ: ಪುರಸಭೆಯ ಸಾಮಾನ್ಯ ಸಭೆಯಲ್ಲಿ ಕರ್ನಾಟಕ ಪುರಸಭೆಗಳ ಅಧಿನಿಯಮ 1964ರ ಕಲಂ 63 ಪ್ರಕಾರ ಪುರಸಭೆಯ ಸ್ಥಾಯಿ ಸಮಿತಿಯ ನೂತನ ಅಧ್ಯಕ್ಷರಾಗಿ 18ನೇ ವಾರ್ಡ್‌ನ ಪುರಸಭೆ ಸದಸ್ಯ ಎಂ.ಉಸ್ಮಾನ್ ಅವರನ್ನು ನೇಮಕ ಮಾಡಲಾಯಿತು. ಶಾಸಕ ಜೆ.ಎನ್. ಗಣೇಶ್ ಹಾಗೂ ಪುರಸಭೆ ಅಧ್ಯಕ್ಷ ಭಟ್ಟ ಪ್ರಸಾದ್ ಅವರ ನೇತೃತ್ವದಲ್ಲಿ ಈ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿತು.

ಈ ಸ್ಥಾಯಿ ಸಮಿತಿಯಲ್ಲಿ ಒಟ್ಟು 9 ಮಂದಿ ಸದಸ್ಯರನ್ನು ರಚಿಸಲಾಗಿದ್ದು, ಪುರಸಭೆ ವ್ಯಾಪ್ತಿಯ ಅಭಿವೃದ್ಧಿ ಕಾರ್ಯಗಳಲ್ಲಿ ಸದೃಢವಾಗಿ ಪಾಲ್ಗೊಳ್ಳುವಂತೆ ಸದಸ್ಯರಿಗೆ ಸೂಚನೆ ನೀಡಲಾಗಿದೆ. ನಗರದ ಮೂಲಸೌಕರ್ಯ, ಸ್ವಚ್ಛತೆ ಹಾಗೂ ಸಾರ್ವಜನಿಕ ಸೇವೆಗಳ ಅಭಿವೃದ್ದಿಗೆ ಸಮಿತಿ ನಿರ್ವಹಿಸುವ ಕಾರ್ಯಪಥ ಮಹತ್ವದ ಪಾತ್ರವಹಿಸಲಿದ್ದು, ನೂತನ ಅಧ್ಯಕ್ಷ ಉಸ್ಮಾನ್ ಅವರ ನೇತೃತ್ವದಲ್ಲಿ ಕಾರ್ಯಕ್ರಮಗಳು ಉಸ್ತುವಾರಿ ಪಡೆಯಲಿದೆ.


Previous Post Next Post

Contact Form

f="https://unpkg.com/video.js/dist/video-js.css" rel="stylesheet">