Kampli: ಅಂಬೇಡ್ಕರ್ ಜಯಂತಿ ಪೂರ್ವಭಾವಿ ಸಭೆ


ಅಂಬೇಡ್ಕರ್ ಜಯಂತಿ ಪೂರ್ವಭಾವಿ ಸಭೆ

ಕಂಪ್ಲಿ :  ತಾಲೂಕು ಆಡಳಿತ ಕಛೇರಿಯಲ್ಲಿ ವಿಶ್ವಮಾನವ, ಭಾರತ ರತ್ನ, ಸಂವಿಧಾನದ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿಯ ಪೂರ್ವಭಾವಿ ಸಭೆ ನಡೆಯಿತು. ಈ ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಸ್ಥಳೀಯ ಪ್ರತಿನಿಧಿಗಳು ಹಾಗೂ ಸಮಾಜದ ಗಣ್ಯರು ಭಾಗವಹಿಸಿದ್ದರು.

ಸಭೆಯಲ್ಲಿ ಅಂಬೇಡ್ಕರ್ ಜಯಂತಿಯನ್ನು ಶಿಸ್ತಿನಿಂದ ಹಾಗೂ ಗೌರವದಿಂದ ಆಚರಿಸುವ ಕುರಿತು ಮಹತ್ವದ ಚರ್ಚೆಗಳು ನಡೆದವು. ಸಾರ್ವಜನಿಕರಿಗೆ ಸ್ವಚ್ಛತೆ ಸಂದೇಶ ಸಾರುವುದು, ಭದ್ರತಾ ವ್ಯವಸ್ಥೆ ಮಾಡುವುದು ಹಾಗೂ ಕಾರ್ಯಕ್ರಮದ ರೂಪುರೇಷೆಗಳನ್ನು ಸಿದ್ಧಪಡಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಹಶೀಲ್ದಾರ್ ಶಿವರಾಜ್ ತಿಳಿಸಿದರು.

ಅಲ್ಲದೆ, ಅಂಬೇಡ್ಕರ್ ಜಯಂತಿಯನ್ನು ಸರಕಾರದ ಮಾರ್ಗಸೂಚಿಯಂತೆ ಆಚರಿಸಲು ತಾಲೂಕು ಆಡಳಿತ ಎಲ್ಲ ರೀತಿಯ ಸಿದ್ಧತೆಗಳನ್ನು ಕೈಗೊಂಡಿದೆ. ಈ ಸಭೆಯಲ್ಲಿ ದಲಿತಪರ ಸಂಘಟನೆಗಳು, ರೈತ ಸಂಘಟನೆಗಳು ಮತ್ತು ಕರ್ನಾಟಕ ಬೌದ್ಧ ಸಮಾಜದ ಪ್ರತಿನಿಧಿಗಳು ಸಹ ಭಾಗವಹಿಸಿದ್ದರು.

Previous Post Next Post

Contact Form

f="https://unpkg.com/video.js/dist/video-js.css" rel="stylesheet">