Kampli : ರಾಜ್ಯ ಮಟ್ಟದ ದಿಶಾ ಸಮಿತಿ ಸದಸ್ಯರಾಗಿ ಎ ಸಿ ದಾನಪ್ಪ ನೇಮಕ


ರಾಜ್ಯ ಮಟ್ಟದ ದಿಶಾ ಸಮಿತಿ ಸದಸ್ಯರಾಗಿ ಎ ಸಿ ದಾನಪ್ಪ ನೇಮಕ

ಕಂಪ್ಲಿ: ಕೇಂದ್ರ ಪುರಸ್ಕೃತ ಯೋಜನೆಗಳ ಪರಿಶೀಲನೆ ಮತ್ತು ಮೇಲುಸ್ತುವಾರಿಗಾಗಿ ರಚಿಸಿರುವ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕರ್ನಾಟಕ ರಾಜ್ಯ ಮಟ್ಟದ ದಿಶಾ ಸಮಿತಿಗೆ ರಾಜ್ಯ ಸದಸ್ಯರಾಗಿ ಎ.ಸಿ.ದಾನಪ್ಪರವರನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರ ನಾಮನಿರ್ದೇಶನ ಮಾಡಿ ಆದೇಶಿಸಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕೇಂದ್ರ ಮತ್ತು ಕೇಂದ್ರ ಪುರಸ್ಕೃತ ಯೋಜನೆಗಳ ಉಸ್ತುವಾರಿಗೆ 2018ರಲ್ಲಿ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಮಂತ್ರಾಲಯವು ದಿಶಾ (Disha-State DEVELOPMENT CO-ORDINATION AND MONITORING COMMITTEE) ಸಮಿತಿಯನ್ನು ರಚಿಸಿರುತ್ತದೆ. 

ಸದರಿ ಸಮಿತಿಯು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವರ ಉಪಾಧ್ಯಕ್ಷತೆಯ ರಾಜ್ಯ ಮಟ್ಟದ ದಿಶಾ ಸಮಿತಿಗೆ  ಸದಸ್ಯರನ್ನಾಗಿ ಭಾರತೀಯ ದಲಿತ ಪ್ಯಾಂಥರ್ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಕಂಪ್ಲಿಯ ಎ.ಸಿ. ದಾನಪ್ಪರವರನ್ನು ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಯೋಜನೆ ಇಲಾಖೆಯು ನೇಮಕ ಮಾಡಿ ಆದೇಶಿಸಿರುತ್ತಾರೆ!

Previous Post Next Post

Contact Form

f="https://unpkg.com/video.js/dist/video-js.css" rel="stylesheet">