ಎಂ.ಡಿ.ಕ್ಯಾಂಪ್ ನಲ್ಲಿ ಕುಟುಂಬ ಕಲಹಕ್ಕೆ ಬೇಸತ್ತು ನೇಣಿಗೆ ಶರಣಾದ ಯುವಕ
ಬಳ್ಳಾರಿ ಜಿಲ್ಲೆಯ ಕಂಪ್ಲಿ ಪಟ್ಟಣದ ಎಂ.ಡಿ. ಕ್ಯಾಂಪ್‌ನಲ್ಲಿ ವಾಸಿಸುತ್ತಿದ್ದ ಯುವಕನೊಬ್ಬ ಕುಟುಂಬ ಕಲಹದಿಂದ ಬೇಸತ್ತು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಈ ದುರ್ಘಟನೆ ನಿನ್ನೆ ರಾತ್ರಿ ನಡೆದಿದೆ.
ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲದರೂ, ಪ್ರಾಥಮಿಕ ಮಾಹಿತಿ ಪ್ರಕಾರ ಕುಟುಂಬದೊಳಗಿನ ವೈಮನಸ್ಯವೇ ಈ ಕೃತ್ಯಕ್ಕೆ ಕಾರಣವೆಂದು ಶಂಕಿಸಲಾಗಿದೆ.
ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ. ಯುವಕನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.