ಕಂಪ್ಲಿ ಆಸ್ಪತ್ರೆ ಸಿಬ್ಬಂದಿಗಳ ಕ್ವಾಟರ್ಸ್‌ನಲ್ಲಿ ಶಾರ್ಟ್ ಸರ್ಕ್ಯೂಟ್: ಟಿವಿ, ಮೊಬೈಲ್ ಸೇರಿದಂತೆ ಎಲೆಕ್ಟ್ರಿಕ್ ಸಾಧನಗಳು ಧ್ವಂಸ
ಕಂಪ್ಲಿ: ಮೇ 21, ಬುಧವಾರ ಸಂಜೆ ಸುಮಾರು 5 ಗಂಟೆ ವೇಳೆಗೆ, ಕಂಪ್ಲಿಯ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ ಇರುವ ಸಿಬ್ಬಂದಿಗಳ ಕ್ವಾಟರ್ಸ್‌ನಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ್ದು, ರಾಮಣ್ಣ ಎಂಬುವವರ ಮನೆಯಲ್ಲಿ ಟಿವಿ, ಮೊಬೈಲ್ ಸೇರಿದಂತೆ ಕೆಲ ಎಲೆಕ್ಟ್ರಿಕ್ ಉಪಕರಣಗಳು ಬ್ಲಾಸ್ಟ್ ಆಗಿವೆ. ಅದೃಷ್ಟವಶಾತ್ ಮನೆಯಲ್ಲಿ ಯಾರೂ ಇರಲಿಲ್ಲದ ಕಾರಣ ಯಾವುದೇ ಪ್ರಾಣಹಾನಿಯಾಗಿಲ್ಲ.
ಘಟನೆ ಬಳಿಕ ಸ್ಥಳದಲ್ಲಿದ್ದ ಯುವಕರು ತಕ್ಷಣ ಮನೆ ಬಾಗಿಲು ಒಡೆದು ಒಳಪ್ರವೇಶಿಸಿ ಬೆಂಕಿ ನಂದಿಸಿದ್ದಾರೆ. ಬಳಿಕ ಸ್ಥಳಕ್ಕೆ ಕೆಇಬಿ ಸಿಬ್ಬಂದಿ ಹಾಗೂ ಗ್ಯಾಸ್ ಸಿಲಿಂಡರ್ ಇಲಾಖೆಯ ಅಧಿಕಾರಿಗಳು ಬಂದು ವಿದ್ಯುತ್ ಲೈನ್ ಹಾಗೂ ಗ್ಯಾಸ್ ಲೈನ್ ಅನ್ನು ನಿಷ್ಕ್ರಿಯಗೊಳಿಸಿ ಮತ್ತಷ್ಟು ಅನಾಹುತವನ್ನು ತಡೆಯಿದ್ದಾರೆ.