Kampli : ವಿಶ್ವ ತಂಬಾಕು ರಹಿತ ದಿನಾಚರಣೆ - ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಜಾಗೃತಿ ಕಾರ್ಯಕ್ರಮ


ವಿಶ್ವ ತಂಬಾಕು ರಹಿತ ದಿನಾಚರಣೆ - ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಜಾಗೃತಿ ಕಾರ್ಯಕ್ರಮ

ಮೇ 31 ರಂದು "ವಿಶ್ವ ತಂಬಾಕು ರಹಿತ ದಿನಾಚರಣೆ" ಅಂಗವಾಗಿ ಕಂಪ್ಲಿಯ ತಾಲೂಕು ಆರೋಗ್ಯಾಧಿಕಾರಿಗಳ ಕಾರ್ಯಾಲಯ ಮತ್ತು ಸಮುದಾಯ ಆರೋಗ್ಯ ಕೇಂದ್ರ ಕಂಪ್ಲಿಯ ಸಹಯೋಗದಲ್ಲಿ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

"ಆಕರ್ಷಕ ಉತ್ಪನ್ನಗಳು – ಕರಾಳ ಉದ್ದೇಶಗಳು" ಎಂಬ ಘೋಷವಾಕ್ಯದೊಂದಿಗೆ ನಡೆದ ಈ ಕಾರ್ಯಕ್ರಮದಲ್ಲಿ ಡಾ. ಶ್ರೀನಿವಾಸ್ (ದಂತ ವೈದ್ಯಾಧಿಕಾರಿ) ಅವರು ತಂಬಾಕು ಉತ್ಪನ್ನಗಳ ಸೇವನೆ ಹಾಗೂ ಧೂಮಪಾನದಿಂದ ಉಂಟಾಗುವ ಗಂಭೀರ ಆರೋಗ್ಯ ಸಮಸ್ಯೆಗಳ ಬಗ್ಗೆ ಸಮುದಾಯದಲ್ಲಿ ಜಾಗೃತಿ ಮೂಡಿಸಿದರು.

ಕಾರ್ಯಕ್ರಮದಲ್ಲಿ ಡಾ. ಹಾರಿಕಾ ಮೇಡಂ, ಡಾ. ವಿಶ್ವನಾಥ್ ಸರ್, ತಾಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳು, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳು, ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿಗಳು, ಎನ್‌ಸಿಡಿ ಸಿಬ್ಬಂದಿವರ್ಗದವರು, ವಿವಿಧ ಇಲಾಖೆಗಳ ಅಧಿಕಾರಿಗಳು, ಆರೋಗ್ಯ ಕೇಂದ್ರದ ಸಿಬ್ಬಂದಿ ಮತ್ತು ಹಲವಾರು ಸಾರ್ವಜನಿಕರು ಭಾಗವಹಿಸಿದ್ದರು.



Previous Post Next Post

Contact Form

f="https://unpkg.com/video.js/dist/video-js.css" rel="stylesheet">