17ರಂದು ವಿದ್ಯುತ್ ಗ್ರಾಹಕರ ಕುಂದು-ಕೊರತೆ ಹಾಗೂ ಜಾಗೃತಿ ಸಭೆ
ಸಿರುಗುಪ್ಪ: ಜೆಸ್ಕಾಂ ವ್ಯಾಪ್ತಿಯ ಸಿರುಗುಪ್ಪ ತಾಲ್ಲೂಕಿನಲ್ಲಿ ಮೇ 17 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಗ್ರಾಹಕರ ಕುಂದು-ಕೊರತೆ ಮತ್ತು ಜಾಗೃತಿ ಸಭೆ ನಡೆಯಲಿದೆ. ಈ ಸಭೆಯನ್ನು ಸಿರುಗುಪ್ಪ ಉಪವಿಭಾಗದ ಜೆಸ್ಕಾಂ ಕಚೇರಿಯಲ್ಲಿ ಏರ್ಪಡಿಸಲಾಗಿದ್ದು, ವಿದ್ಯುತ್ ಸಂಬಂಧಿತ ದೂರುಗಳು, ಸಮಸ್ಯೆಗಳು ಮತ್ತು ಸಾರ್ವಜನಿಕರ ಜಾಗೃತಿ ವಿಷಯವಾಗಿ ಚರ್ಚೆ ನಡೆಯಲಿದೆ.
ಸಿರುಗುಪ್ಪ ಜೆಸ್ಕಾಂ ವ್ಯಾಪ್ತಿಯ ಗ್ರಾಹಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಸಭೆಗೆ ಹಾಜರಾಗಿ ತಮ್ಮ ಅಭಿಪ್ರಾಯ ಹಾಗೂ ಸಮಸ್ಯೆಗಳನ್ನು ವ್ಯಕ್ತಪಡಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಮೇ 16 ಶುಕ್ರವಾರ ಸಂಜೆ 5ಕ್ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ : ರಾಜಶೇಖರ, ಸಿದ್ದಿ ಟಿವಿ, ಸಿರುಗುಪ್ಪ