Kampli : ಜೂನ್ 5 ರಂದು ಕಂಪ್ಲಿಯಲ್ಲಿ ವಿದ್ಯುತ್ ವ್ಯತ್ಯಯ, ಜೆಸ್ಕಾಂ ಅಧಿಕಾರಿಗಳಿಂದ ಪ್ರಕಟಣೆ


ಜೂನ್ 5 ರಂದು ಕಂಪ್ಲಿಯಲ್ಲಿ ವಿದ್ಯುತ್ ವ್ಯತ್ಯಯ, ಜೆಸ್ಕಾಂ ಅಧಿಕಾರಿಗಳಿಂದ ಪ್ರಕಟಣೆ

ಕಂಪ್ಲಿ ಜೆಸ್ಕಾಂ ವ್ಯಾಪ್ತಿಯ 33 KV ಉಪಕೇಂದ್ರದಲ್ಲಿ ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ ಜೂನ್ 5 ರಂದು ಕಂಪ್ಲಿ ಭಾಗದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ರಾಮಸಾಗರ, ನಂ.10 ಮುದ್ದಾಪುರ, ಕಣಿವೆ ತಿಮ್ಮಾಪುರ, ಬೆಳಗೋಡುಹಾಳು, ಶಂಕರ್‌ಸಿಂಗ್ ಕ್ಯಾಂಪ್ ಹಾಗೂ ಕೊಟ್ಟಾಲ್ ಪ್ರದೇಶಗಳ F3, F4,F2 ಮತ್ತು ಎಫ್-5 ಐಪಿ ಸೆಟ್ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯ ಸಂಭವಿಸಲಿದೆ.

ಆದರೆ, ಈ ಮಾರ್ಗಗಳ ಐಪಿ ಸೆಟ್‌ಗಳಿಗೆ ಬೆಳಿಗ್ಗೆ 4 ಗಂಟೆಯಿಂದ ವಿದ್ಯುತ್ ಸರಬರಾಜು ಮಾಡಲಾಗುತ್ತದೆ ಎಂದು ಜೆಸ್ಕಾಂ ತಿಳಿಸಿದೆ.

ಸಾರ್ವಜನಿಕರು ಹಾಗೂ ಗ್ರಾಹಕರು ಸಹಕಾರ ನೀಡಬೇಕು ಎಂದು ಜೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಜೂನ್ 4, ಬುಧವಾರ ಸಂಜೆ 5ಗಂಟೆಗೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Previous Post Next Post

Contact Form

f="https://unpkg.com/video.js/dist/video-js.css" rel="stylesheet">