Kampli : ತ್ಯಾಗ, ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬದ ಪ್ರಯುಕ್ತ ಪ್ರಾರ್ಥನೆ ಸಲ್ಲಿಸಿದ ಮುಸ್ಲಿಂ ಭಾಂದವರು


ಕಂಪ್ಲಿ: ಈದ್ಗಾ ಮೈದಾನದಲ್ಲಿ ಭಕ್ತಿಯಿಂದ ಬಕ್ರೀದ್ ಹಬ್ಬ ಆಚರಣೆ

ಕಂಪ್ಲಿ ಪಟ್ಟಣದ ಮುಸ್ಲಿಂ ಭಾಂದವರು ಜೂನ್ 7, ಶನಿವಾರ ಬೆಳಿಗ್ಗೆ 9:45ಕ್ಕೆ ಈದ್ಗಾ ಮೈದಾನದಲ್ಲಿ ಬಕ್ರೀದ್ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಿದರು.

ಬಲಿದಾನದ ಸಂಕೇತವಾದ ಈ ಹಬ್ಬವನ್ನು ಜಿಲ್ಲೆಯಾದ್ಯಂತ ಮುಸ್ಲಿಂ ಸಮುದಾಯದವರು ಶ್ರದ್ದೆ ಹಾಗೂ ಸಂಯಮದಿಂದ ಆಚರಿಸಿದರು. ಮುಂಜಾನೆಯಿಂದಲೇ ಈದ್ಗಾ ಮೈದಾನದಲ್ಲಿ ಅಪಾರ ಸಂಖ್ಯೆಯಲ್ಲಿ ಮುಸ್ಲಿಂ ಬಾಂಧವರು ಸೇರಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಧರ್ಮಗುರುಗಳು ಬಕ್ರೀದ್ ಹಬ್ಬದ ಮಹತ್ವವನ್ನು ವಿವರಿಸಿದರು. ದಾನ, ಧರ್ಮ ಹಾಗೂ ಬಾಳುವ ವಿಧಾನಗಳ ಕುರಿತು ಉಪದೇಶ ನೀಡಿದರು. ಸಮಾಜದಲ್ಲಿ ಪರಸ್ಪರ ಸಹೋದರತ್ವದಿಂದ ಬಾಳುವಂತೆ ಕರೆ ನೀಡಿದರು.

ಪ್ರಾರ್ಥನೆಯ ಬಳಿಕ ಮುಸ್ಲಿಂ ಭಾಂದವರು ಪರಸ್ಪರ ಬಕ್ರೀದ್ ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು.

Previous Post Next Post

Contact Form

f="https://unpkg.com/video.js/dist/video-js.css" rel="stylesheet">