Kampli : ಹಂಪಾದೇವನಹಳ್ಳಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಯೋಜನೆಗೆ ಭೂಮಿ ಪೂಜೆ


 ಹಂಪಾದೇವನಹಳ್ಳಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಯೋಜನೆಗೆ ಭೂಮಿ ಪೂಜೆ

ಕಂಪ್ಲಿ ತಾಲೂಕು: ಹಂಪಾದೇವನಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಜಾವುಕು ಮತ್ತು ಇತರೆ ಎರಡು ಹಳ್ಳಿಗಳಿಗೆ ಕುಡಿಯುವ ನೀರಿನ ಸರಬರಾಜು ಉದ್ದೇಶದಿಂದ ಕೆರೆ ನಿರ್ಮಾಣ ಹಾಗೂ ಪೈಪ್‌ಲೈನ್ ಅಳವಡಿಕೆ ಕಾಮಗಾರಿಗೆ ಶಾಸಕ ಜೆ.ಎನ್. ಗಣೇಶ್ ಅವರು, ಇಂದು ಭೂಮಿಪೂಜೆ ನೆರವೇರಿಸಿದರು.

ಈ ಅಭಿವೃದ್ಧಿ ಕಾಮಗಾರಿ ಪೂರ್ಣಗೊಂಡ ನಂತರ, ಒಟ್ಟು ಮೂರು ಹಳ್ಳಿಗಳಿಗೆ ಪೈಪ್‌ಲೈನ್ ಮೂಲಕ ಶುದ್ಧ ಕುಡಿಯುವ ನೀರು ಲಭ್ಯವಾಗಲಿದೆ ಎಂದು ಶಾಸಕ ಗಣೇಶ್ ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಹಂಪಾದೇವನಹಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು ಮತ್ತು ಸ್ಥಳೀಯ ಗ್ರಾಮ ಮುಖಂಡರು ಉಪಸ್ಥಿತರಿದ್ದರು.

Previous Post Next Post

Contact Form

f="https://unpkg.com/video.js/dist/video-js.css" rel="stylesheet">