Kampli: ಸಚಿವ ಜಮೀರ್ ಅಹ್ಮದ್ ರವರನ್ನು ಸಚಿವ ಸಂಪುಟದಿಂದ ವಜಾ ಮಾಡಿ : ಕಂಪ್ಲಿ ಬಿಜೆಪಿ ಮಂಡಲ ಆಗ್ರಹ


ಸಚಿವ ಜಮೀರ್ ಅಹ್ಮದ್  ರವರನ್ನು ಸಚಿವ ಸಂಪುಟದಿಂದ ವಜಾ ಮಾಡಿ : ಕಂಪ್ಲಿ ಬಿಜೆಪಿ ಮಂಡಲ ಆಗ್ರಹ

ಕಂಪ್ಲಿ (ಬಳ್ಳಾರಿ): ವಸತಿ ಇಲಾಖೆಯಲ್ಲಿ ನಡೆದ ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ರಾಜೀನಾಮೆ ನೀಡಬೇಕು ಎಂದು ಕಂಪ್ಲಿಯ ಬಿಜೆಪಿ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಇಲ್ಲದಿದ್ದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಜಮೀರ್ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಬೇಕು ಎಂದು ಒತ್ತಾಯಿಸಿದ್ರು.

ಕಂಪ್ಲಿ ಬಿಜೆಪಿ ಮಂಡಲ ವತಿಯಿಂದ ತಾಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿ ತಮ್ಮ ಅಕ್ರೋಶ ವ್ಯಕ್ತಪಡಿಸಿದರು. 

ಸಚಿವ ಜಮೀರ್ ಅವರ ಆಪ್ತ ಕಾರ್ಯದರ್ಶಿ ಸರ್ಫರೋಜ್ ಖಾನ್ ಅವರೇ ಲಂಚ ನೀಡುವ ದೋಷದ ಕುರಿತು ಆಡಳಿತ ಪಕ್ಷದ ಕೆಲ ಶಾಸಕರಿಗೆ ಮಾಹಿತಿ ನೀಡಿರುವುದು ಬಹಿರಂಗವಾಗಿರುವುದರಿಂದ, ಸರ್ಕಾರದ ನೈತಿಕ ಸ್ಥಿತಿ ಕುಸಿತಗೊಂಡಿದೆ ಎಂದು ಬಿಜೆಪಿ ಆರೋಪಿಸಿದೆ.

Previous Post Next Post

Contact Form

f="https://unpkg.com/video.js/dist/video-js.css" rel="stylesheet">