ಅಖಿಲ ಭಾರತ ಮುಷ್ಕರ ಬೆಂಬಲಿಸಿ – ಕಂಪ್ಲಿಯಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ
ಕಂಪ್ಲಿ (ಜುಲೈ 9, ಬುಧವಾರ): ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನಿಲುವನ್ನು ಖಂಡಿಸಿ ಹಾಗೂ ಅಖಿಲ ಭಾರತ ಮುಷ್ಕರಕ್ಕೆ ಬೆಂಬಲ ಸೂಚಿಸಿ, ಬಳ್ಳಾರಿ ಜಿಲ್ಲೆಯ ಕಂಪ್ಲಿ ಪಟ್ಟಣದಲ್ಲಿ ಸಂಯುಕ್ತ ಹೋರಾಟ ಕರ್ನಾಟಕ ಮತ್ತು CITU ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ಬೆಳಿಗ್ಗೆ 11:40ರ ಸಮಯಕ್ಕೆ ಉದ್ಬವ ಗಣಪತಿ ದೇವಸ್ಥಾನದಿಂದ ಮೆರವಣಿಗೆಯಾಗಿ ಆರಂಭಗೊಂಡ ಪ್ರತಿಭಟನಾ ಕಾರ್ಯಕ್ರಮ, ಪಟ್ಟಣದ ಅಂಬೇಡ್ಕರ್ ಸರ್ಕಲ್‌ನಲ್ಲಿ ಮಹತ್ವಪೂರ್ಣವಾಗಿ ನಡೆಯಿತು. ವಿವಿಧ ಕಾರ್ಮಿಕ ಸಂಘಟನೆಗಳು, ಮಹಿಳಾ ಸಂಘಟನೆಗಳು ಹಾಗೂ ಬಡವರಿಗೆ ನ್ಯಾಯ ಬೇಕೆಂದಿರುವ ಕಾರ್ಯಕರ್ತರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಪ್ರತಿಭಟನಾಕಾರರು ತಮ್ಮ ಮಾತಿನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. “ವೇತನ ಸಂಹಿತೆ (4), ಕೈಗಾರಿಕಾ ಸಂಹಿತೆ (3), ಔದ್ಯೋಗಿಕ ಸುರಕ್ಷತೆ ಮತ್ತು ಆರೋಗ್ಯ (13), ಮತ್ತು ಸಾಮಾಜಿಕ ಭದ್ರತಾ ಸಂಹಿತೆ (9) ಸೇರಿ ಒಟ್ಟು 29 ಕಾರ್ಮಿಕ ಕಾನೂನುಗಳಲ್ಲಿ ತಿದ್ದುಪಡಿ ಪ್ರಕ್ರಿಯೆ ನಡೆಯುತ್ತಿದ್ದು, ಇವು ಎಲ್ಲವೂ ಅಸಂಘಟಿತ ಕ್ಷೇತ್ರದ ಕಾರ್ಮಿಕರ, ಮಹಿಳಾ ಕಾರ್ಮಿಕರ ಹಾಗೂ ಅನೌಪಚಾರಿಕ ಉದ್ಯೋಗಿಗಳ ಹಿತಾಸಕ್ತಿಗೆ ವಿರುದ್ಧವಾಗಿದೆ,” ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಂಘಟನಾ ಮುಖಂಡರು, ಈ ಹೊಸ ಕಾನೂನುಗಳು ಕಾರ್ಮಿಕರ ಹಕ್ಕುಗಳನ್ನು ತಗ್ಗಿಸುವ ಪ್ರಯತ್ನವೆಂದು ಆರೋಪಿಸಿ, ತಕ್ಷಣವೇ ಇಂತಹ ತಿದ್ದುಪಡಿ ಕ್ರಮಗಳನ್ನು ಹಿಂತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.
— ಸಿದ್ದಿ ಟಿವಿ ವರದಿ