ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ಹಾಗೂ ಲೇಖನಿ ಸಾಮಗ್ರಿ ವಿತರಣೆ
ಕಂಪ್ಲಿ : ಸ್ಥಳೀಯ ಕೋಟೆಯ ಶ್ರೀ ಸ್ವಾಮಿ ವಿವೇಕಾನಂದ ಹಿರಿಯ ಪ್ರಾಥಮಿಕ ಪಾಠಶಾಲೆಯ ವಿದ್ಯಾರ್ಥಿಗಳಿಗೆ ಮಂಗಳವಾರ ಉಚಿತವಾಗಿ ನೋಟ್ ಬುಕ್ ಹಾಗೂ ಲೇಖನಿ ಸಾಮಗ್ರಿಗಳನ್ನು ವಿತರಿಸಲಾಯಿತು.
ನೋಟ್ ಪುಸ್ತಕದ ಪ್ರಾಯೋಜಕತ್ವ ನೀಡಿದ ಮಂಜುನಾಥ್ ಕಲಾಲ್ ಪುಸ್ತಕಗಳನ್ನು ವಿತರಿಸಿ ಮಾತನಾಡಿ ಇಲ್ಲಿಯವರೆಗೆ ವಿದ್ಯಾರ್ಥಿಗಳಿಗೆ 2.25 ಲಕ್ಷಕ್ಕೂ ಹೆಚ್ಚು ಪುಸ್ತಕಗಳನ್ನು ಉಚಿತವಾಗಿ ವಿತರಿಸಲಾಗಿದೆ.
100ಕ್ಕೂ ಹೆಚ್ಚು ಸರ್ಕಾರಿ ಮತ್ತು 60ಕ್ಕೂ ಹೆಚ್ಚು ಕನ್ನಡ ಮಾಧ್ಯಮ ಖಾಸಗಿ ಶಾಲೆಗಳ ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆಗೆ ನೆರವಾಗುವ ಉದ್ದೇಶದಿಂದ ಕಳೆದ ಹಲವಾರು ವರ್ಷಗಳಿಂದ ಈ ಕಾರ್ಯ ಮುಂದುವರೆದಿದೆ. ಶಾಲೆಗಳ ಮಕ್ಕಳಿಗೆ ಉಚಿತವಾಗಿ ನೋಟ್ ಪುಸ್ತಕಗಳನ್ನು ವಿತರಿಸುವ ಮೂಲಕ ತಮ್ಮ ಕೈಲಾದಷ್ಟು ಅಳಿಲು ಸೇವೆಯನ್ನು ಮಾಡುತ್ತಿರುವುದಾಗಿ ತಿಳಿಸಿದರು. ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಪಠ್ಯಕ್ಕೆ ಸೀಮಿತವಾಗದೇ ಪಠ್ಯೇತರ ಚಟುವಟಿಕೆಯಲ್ಲಿ ಭಾಗವಹಿಸುವ ಮೂಲಕ ಉತ್ತಮ ಆರೋಗ್ಯಕ್ಕ ಸಹಕಾರಯಾಗಿದ್ದು ಶಿಕ್ಷಕರು ಹಾಗೂ ಪೋಷಕರು ವಿದ್ಯಾರ್ಥಿಗಳ ಪ್ರಗತಿಗೆ ಶ್ರಮ ವಹಿಸಬೇಕು, ಶಾಲೆ ಬೆಳವಣಿಗೆಗೆ ಸಂಘ ಸಂಸ್ಥೆಗಳು, ದಾನಿಗಳು, ಹಳೇ ವಿದ್ಯಾರ್ಥಿಗಳು ಶೈಕ್ಷಣಿಕ ವರ್ಷದಲ್ಲಿ ಶಾಲೆಗಳಿಗೆ ಬೇಟಿ ನೀಡಿ ಪ್ರೋತ್ಸಾಹ ನೀಡಬೇಕು, ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ತಡೆಯಲು ನಾವು ಕೈಜೋಡಿಸುವ ಮೂಲಕ ಶಿಕ್ಷಣಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು ಎಂದು ಮಕ್ಕಳಿಗೆ ಶುಭ ಹಾರೈಸಿದರು.
ಶಾಲಾ ಮುಖ್ಯಗುರು ಬಡಿಗೇರ್ ಜಿಲಾನಸಾಬ್ ಮಾತನಾಡಿ ಶಾಲಾ ಮಕ್ಕಳು ಗುಣಮಟ್ಟದ ಶಿಕ್ಷಣ ದೊರೆಯುವಂತೆ ಅಗತ್ಯವಾದ ಸವಲತ್ತುಗಳನ್ನು ಹಾಗೂ ಪ್ರತಿ ನಿತ್ಯ ನುರಿತ ಶಿಕ್ಷಕರಿಂದ ಭೋಧನಾ ಕಾರ್ಯಕ್ರಮ ಶೈಕ್ಷಣಿಕ ವರ್ಷಪೂರ್ತಿ ಮಾಡುತ್ತಿದ್ದು ಮಕ್ಕಳ ಶೈಕ್ಷಣಿಕ ಪ್ರಗತಿಯ ಬಗ್ಗೆ ಕಾಳಜಿ ವಹಿಸುವುದರ ಮೂಲಕ ಮಕ್ಕಳಿಗೆ ಗುಣ ಮಟ್ಟದ ಶಿಕ್ಷಣ ದೊರಕುವಂತೆ ಮಾಡಿದ್ದು ಸುತ್ತಮುತ್ತಲಿನ ಪಾಲಕ ಪೋಷಕರು ಹಾಗು ಮಕ್ಕಳು ಇದರ ಸದುಪಯೋಗ ಪಡೆಯುವಂತೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಹನುಮೇಶ್ ಕಲಾಲ್, ಜೆ ರೆಹಮಾನ್ ಸಾಬ್, ಬಸವರಾಜಪ್ಪ, ಚೆನ್ನಪ್ಪ, ಶಂಕ್ರಮ್ಮ, ಶಾಲಾ ಶಿಕ್ಷಕಿಯರಾದ ಕೆ. ಶ್ವೇತ, ಕೋಲ್ಕಾರ್ ಉಮಾ, ಮಣ್ಣೂರ್ ಲಕ್ಷ್ಮಿ , ಗೌಸಿಯ, ಸುನಿತಾ, ಆರ್. ಕೆ. ಮುಸ್ಕಾನ್ , ಪುಷ್ಪವತಿ, ವರ್ಷಾ ಮಜಂದಾರ, ಜೆ ಅಕ್ಷತಾ, ಸಹಾಯಕಿ ಶರ್ಮಾಶಬೀ ಪೋಷಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.