ಕಂಪ್ಲಿ ತಾಲ್ಲೂಕಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಜನಾಂಗದವರ ಸಮಸ್ಯೆಗಳನ್ನು ಆಲಿಸಿ, ಪರಿಹರಿಸಲು ಕಂಪ್ಲಿ ತಾಲ್ಲೂಕು ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಮಟ್ಟದ ಕುಂದುಕೊರತೆ ಸಭೆಯನ್ನು ಆ.29 ರಂದು ಬೆಳಿಗ್ಗೆ 11 ಗಂಟೆಗೆ ಕಂಪ್ಲಿಯ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಕಂಪ್ಲಿ ಪುರಸಭೆ ವ್ಯಾಪ್ತಿಯಲ್ಲಿ ಬರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಸಂಘದ ಮುಖ್ಯಸ್ಥರು, ಸದಸ್ಯರು, ದಲಿತ ಮುಖಂಡರು ಹಾಗೂ ಸಮುದಾಯದ ಜನರು ಸಮಸ್ಯೆಗಳಿದ್ದಲ್ಲಿ ಅಂದು ನಡೆಯುವ ಕುಂದು ಕೊರತೆ ಸಭೆಯಲ್ಲಿ ಭಾಗವಹಿಸಬಹುದು ಎಂದು ಕಂಪ್ಲಿ ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------------