Kampli : ಅತ್ಯಾಚಾರ ಪ್ರಕರಣದ ಆರೋಪಿಗೆ ಗಡಿಪಾರು: ಸಮಾಜದ ಸ್ವಾಸ್ಥ್ಯ ಕಾಪಾಡುವ ಉದ್ದೇಶದಿಂದ ಕ್ರಮ



ಅತ್ಯಾಚಾರ ಪ್ರಕರಣದ ಆರೋಪಿಗೆ ಗಡಿಪಾರು
ಅತ್ಯಾಚಾರ ಪ್ರಕರಣದ ಆರೋಪಿಗೆ ಗಡಿಪಾರು
ಸಮಾಜದ ಸ್ವಾಸ್ಥ್ಯ ಕಾಪಾಡುವ ಉದ್ದೇಶದಿಂದ ಕ್ರಮ
ಕಂಪ್ಲಿ, ಆ.2: ಸಿದ್ದಿ ಟಿವಿ, ರಘುವೀರ್
2014ನೇ ಸಾಲಿನಲ್ಲಿ ಕಂಪ್ಲಿ ಪಟ್ಟಣದ ಎಂ.ಡಿ ಕ್ಯಾಂಪ್ ನಿವಾಸಿ ದೌಲಾಸಾಬ್ (ವಯಸ್ಸು 30), ತಂದೆ ಹುಸೇನ್ ಸಾಬ್ ಮೇಲೆ ಅಪ್ರಾಪ್ತ ವಯಸ್ಸಿನ ದಲಿತ ಬಾಲಕಿ ಮೇಲಿನ ಅತ್ಯಾಚಾರ ಆರೋಪದಲ್ಲಿ ಕಂಪ್ಲಿ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ಗಳು 366(ಎ), 506, 376, 114 ಮತ್ತು ಪಾಕ್ಸೋ ಕಾಯ್ದೆಯ 4 & 6, ಹಾಗು ಎಸ್‌ಸಿ/ಎಸ್‌ಟಿ (ಅತ್ಯಾಚಾರ, ಭಯೊತ್ಪಾದನೆ) ಕಾಯ್ದೆಯ 3(2)(5) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣದಲ್ಲಿ ಆರೋಪಿಗೆ 2014 ರಿಂದ 2023 ರವರೆಗೆ ಜೈಲು ಶಿಕ್ಷೆ ವಿಧಿಸಲಾಗಿತ್ತು. ಜೈಲಿನಿಂದ ಬಿಡುಗಡೆಯಾದ ನಂತರ ಈತ ಪುನಃ ಅಪರಾಧ ಚಟುವಟಿಕೆಗಳಲ್ಲಿ ತೊಡಗಿದ್ದು, 2025 ಮೇ 10ರಂದು ಶಿಕಾರಿಹಟ್ಟಿ ಕಾಲೋನಿಯ ಬಾಲಕನ ಮೇಲೆ ಹಲ್ಲೆ ಮಾಡಿದ ಪ್ರಕರಣ ಕೂಡ ದಾಖಲಾಗಿತ್ತು.

ಆತನಲ್ಲಿ ಯಾವುದೇ ಸುಧಾರಣೆ ಕಂಡುಬಂದಿಲ್ಲದ ಹಿನ್ನೆಲೆಯಲ್ಲಿ, ಸಾರ್ವಜನಿಕ ಶಾಂತಿ ಮತ್ತು ಸಮಾಜದ ಭದ್ರತೆಗೆ ಭಂಗ ಆಗದಂತೆ ನೋಡಿಕೊಳ್ಳಲು, ಕರ್ನಾಟಕ ಪೊಲೀಸ್ ಕಾಯ್ದೆ 1963ರ ಸೆಕ್ಷನ್ 55(ಎ) ಅಡಿಯಲ್ಲಿ ಜಿಲ್ಲಾಧಿಕಾರಿ ಆದೇಶದಂತೆ ದೌಲಾಸಾಬ್ ಅವರನ್ನು ಬಳ್ಳಾರಿ ಜಿಲ್ಲೆಯಿಂದ ರಾಮನಗರ ಜಿಲ್ಲೆಯ ಕನಕಪುರ ಪಟ್ಟಣಕ್ಕೆ 3 ತಿಂಗಳ ಕಾಲ ಗಡಿಪಾರು ಮಾಡಲಾಗಿದೆ.

ಈತನನ್ನು ಕನಕಪುರ ಪೊಲೀಸ್ ಠಾಣೆಯ ಅಧೀನಕ್ಕೆ ಹಸ್ತಾಂತರಿಸಲಾಗಿದೆ ಎಂದು ಕಂಪ್ಲಿ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Previous Post Next Post

Contact Form

f="https://unpkg.com/video.js/dist/video-js.css" rel="stylesheet">