ಕಂಪ್ಲಿ – ಕುಡತಿನಿ ವ್ಯಾಪ್ತಿಯ ಎರಡು ಗ್ರಾಮಗಳಲ್ಲಿ ಗಣೇಶ ಹಬ್ಬದ ಸಾರ್ವಜನಿಕ ಆಚರಣೆ ನಿಷೇಧ
ಕಂಪ್ಲಿ : ಬಳ್ಳಾರಿ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾ ಮ್ಯಾಜಿಸ್ಟ್ರೇಟ್ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಕಂಪ್ಲಿ ಪೊಲೀಸ್ ಠಾಣೆ ವ್ಯಾಪ್ತಿಯ ಗೋನಾಳ್ (ನಂ.15) ಹಾಗೂ ಕುಡತಿನಿ ಠಾಣೆ ವ್ಯಾಪ್ತಿಯ ಹೊನ್ನಳ್ಳಿ ಗ್ರಾಮಗಳಲ್ಲಿ ಈ ವರ್ಷದ ಗಣೇಶ ಹಬ್ಬದ ಅಂಗವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ, ಮನರಂಜನಾ ಕಾರ್ಯಕ್ರಮಗಳು ಹಾಗೂ ಜನಸಂದಣಿ ಸೇರುವುದನ್ನು ನಿಷೇಧಿಸುವ ಆದೇಶ ಹೊರಡಿಸಿದ್ದಾರೆ.
🔹 ಜಿಲ್ಲಾಡಳಿತದಿಂದ ತಿಳಿಸಿದಂತೆ, ಈ ಗ್ರಾಮಗಳಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣಗೊಂಡಿದ್ದು, ದ್ವೇಷ-ಹಗೆತನದ ಹಿನ್ನೆಲೆಯಿಂದ ಅಹಿತಕರ ಘಟನೆಗಳ ಸಂಭವವಿರುವ ಶಂಕೆ ವ್ಯಕ್ತವಾಗಿದೆ.
🔹 ಹೀಗಾಗಿ, ಕಾನೂನು ಮತ್ತು ಸುವ್ಯವಸ್ಥೆ ಕದಡುವ ಸಾಧ್ಯತೆಯನ್ನು ತಡೆಗಟ್ಟುವ ಸಲುವಾಗಿ ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 35ರನ್ವಯ ಈ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
🔹 ಆದೇಶ ಪ್ರಕಾರ, ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ, ಹಬ್ಬದ ಅಂಗವಾಗಿ ಯಾವುದೇ ಮನರಂಜನಾ ಕಾರ್ಯಕ್ರಮ ಆಯೋಜನೆ ಹಾಗೂ ದೊಡ್ಡ ಮಟ್ಟದ ಜನಸಮೂಹ ಸೇರುವುದನ್ನು ಸಂಪೂರ್ಣ ನಿಷೇಧಿಸಲಾಗಿದೆ.
ಈ ಆದೇಶ ಉಲ್ಲಂಘನೆ ಮಾಡಿದವರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.