ಸಚಿವ ಸ್ಥಾನಕ್ಕೆ ಅವಕಾಶ ದೊರೆತರೆ ಪ್ರಮಾಣಿಕ ಸೇವೆ ಮಾಡುವೆ : ಶಾಸಕ ಜೆ.ಎನ್. ಗಣೇಶ್
ಕಂಪ್ಲಿ:ಪಟ್ಟಣದ ವಾಲ್ಮೀಕಿ ಸರ್ಕಲ್‌ನಿಂದ ಶುಗರ್ ಫ್ಯಾಕ್ಟರಿ ವೆಲ್ಕಂ ಬೋರ್ಡ್‌ವರೆಗಿನ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಜೆ.ಎನ್. ಗಣೇಶ್ ಅವರು ಸೆಪ್ಟೆಂಬರ್ 1, ಸೋಮವಾರ ಮಧ್ಯಾಹ್ನ 12 ಗಂಟೆಗೆ ಭೂಮಿಪೂಜೆ ನೆರವೇರಿಸಿದರು.ಈ ರಸ್ತೆ ಅಭಿವೃದ್ಧಿ ಕಾಮಗಾರಿಯಿಂದ ಸಂಚಾರ ದಟ್ಟಣೆ ಕಡಿಮೆಯಾಗುವ ಜೊತೆಗೆ ನಾಗರಿಕರಿಗೆ ಸುಗಮ ಸಂಚಾರದ ಅನುಕೂಲತೆ ಸಿಗಲಿದೆ.
ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಗಣೇಶ್ ಅವರು,➡ “ಜನರ ಅಭಿವೃದ್ದಿ ನನ್ನ ಮೊದಲ ಆದ್ಯತೆ. ಖಾಲಿ ಇರುವ ವಾಲ್ಮೀಕಿ ಅಭಿವೃದ್ಧಿ ನಿಗಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನಕ್ಕೆ ಅವಕಾಶ ದೊರೆತರೆ ಪ್ರಮಾಣಿಕವಾಗಿ ಕೆಲಸ ಮಾಡುತ್ತೇನೆ. ಅಭಿವೃದ್ಧಿ ಕಾರ್ಯಗಳಲ್ಲಿ ಯಾವುದೇ ರೀತಿಯ ಅಸಮರ್ಪಕತೆ ನಡೆಯದಂತೆ ಕಣ್ಗಾವಲು ಇಡುವೆ” ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ಭಟ್ಟ ಪ್ರಸಾದ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್, ಪುರಸಭೆ ಸದಸ್ಯರು ಹಾಗೂ ರೈತ ಮುಖಂಡರು ಉಪಸ್ಥಿತರಿದ್ದು, ಶಾಸಕರಿಗೆ ಬೆಂಬಲ ವ್ಯಕ್ತಪಡಿಸಿದರು.