ಮಳೆರಾಯನ ಆರ್ಭಟ – ತಾಲೂಕು ಕಚೇರಿ ಮುಂಭಾಗದಲ್ಲಿ ಬೃಹತ್ ಮರ ಬಿದ್ದು ವಿದ್ಯುತ್ ವ್ಯತ್ಯಯ
ಕಂಪ್ಲಿ: ನಗರದಲ್ಲಿ ನಿನ್ನೆ ರಾತ್ರಿ ಸುರಿದ ಗಾಳಿ-ಮಳೆಯಿಂದಾಗಿ ತಾಲೂಕು ಕಚೇರಿ ಮುಂಭಾಗದಲ್ಲಿದ್ದ ಬೃಹತ್ ಮರವೊಂದು ಮುರಿದು ಬಿದ್ದಿದೆ.
ಬಿದ್ದ ಮರವು ಪಕ್ಕದಲ್ಲಿ ಹಾದು ಹೋಗುತ್ತಿದ್ದ ವಿದ್ಯುತ್ ತಂತಿಗಳ ಮೇಲೆ ಬಿದ್ದ ಪರಿಣಾಮ, ಆ ಪ್ರದೇಶದಲ್ಲಿ ತಾತ್ಕಾಲಿಕವಾಗಿ ವಿದ್ಯುತ್ ಸರಬರಾಜು ಸ್ಥಗಿತಗೊಂಡಿದೆ.
ಘಟನಾ ಸ್ಥಳಕ್ಕೆ ವಿದ್ಯುತ್ ಇಲಾಖೆ ಹಾಗೂ ಪುರಸಭೆ ಸಿಬ್ಬಂದಿ ಭೇಟಿ ನೀಡಿ, ಮರ ತೆರವುಗೊಳಿಸುವ ಹಾಗೂ ವಿದ್ಯುತ್ ಸರಬರಾಜು ಪುನರಾರಂಭಿಸಲು ಕಾರ್ಯಾಚರಣೆ ಕೈಗೊಂಡಿದ್ದಾರೆ.