ಕಂಪ್ಲಿ ಪುರಸಭೆ: ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ಕಂಪ್ಲಿ ಪುರಸಭೆ ವತಿಯಿಂದ 2025-26ನೇ ಸಾಲಿನ ಎಸ್.ಎಫ್.ಸಿ ಶೇ.7.25 (ಇತರೆ ಹಿಂದುಳಿದವರ ಕಲ್ಯಾಣ) ಹಾಗೂ ಶೇ.5 (ವಿಕಲಚೇತನರ) ವೈಯಕ್ತಿಕ ಸೌಲಭ್ಯ ಯೋಜನೆಗಳಡಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಹಿಂದುಳಿದ ವರ್ಗ ಹಾಗೂ ವಿಕಲಚೇತನ ಸಮುದಾಯದ ವಿದ್ಯಾರ್ಥಿಗಳಿಗೆ ವಿವಿಧ ಹಂತಗಳ ವ್ಯಾಸಂಗಕ್ಕಾಗಿ ವಿಶೇಷ ನೆರವು ಒದಗಿಸಲಾಗುವುದು. ಅರ್ಜಿಗಳನ್ನು ಸೆಪ್ಟೆಂಬರ್ 30ರೊಳಗೆ ಸಲ್ಲಿಸಲು ಸೂಚಿಸಲಾಗಿದೆ.
ಅಗತ್ಯ ದಾಖಲೆಗಳು:
ನಿಗದಿತ ಅರ್ಜಿ ನಮೂನೆ
ಜಾತಿ ಹಾಗೂ ಆದಾಯ ಪ್ರಮಾಣ ಪತ್ರ
ಆಧಾರ್ ಕಾರ್ಡ್, ಐಡಿ ಕಾರ್ಡ್
ಮೂರು ಭಾವಚಿತ್ರಗಳು
ಪ್ರಸಕ್ತ ಸಾಲಿನ ವಿದ್ಯಾಭ್ಯಾಸದ ಪ್ರಮಾಣ ಪತ್ರ
ಹಿಂದುಳಿದ ಕಲ್ಯಾಣ ಇಲಾಖೆ/ಸಮಾಜ ಕಲ್ಯಾಣ ಇಲಾಖೆಯಿಂದ ಯಾವುದೇ ಸೌಲಭ್ಯ ಪಡೆಯದಿರುವ ಬಗ್ಗೆ ಪ್ರಮಾಣ ಪತ್ರ,ಇತರೆ ಅಗತ್ಯ ದಾಖಲೆಗಳು
ಹೆಚ್ಚಿನ ಮಾಹಿತಿಗಾಗಿ ಕಂಪ್ಲಿ ಪುರಸಭೆ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪುರಸಭೆ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.