ಕಂಪ್ಲಿ ತಾಲೂಕಿನಲ್ಲಿ ಇತ್ತೀಚೆಗೆ ಆರಂಭಗೊಂಡಿರುವ ದೇವದಾಸಿ ಸರ್ವೇ ಕಾರ್ಯದಲ್ಲಿ, ಇನ್ನೂ ಜಿಲ್ಲೆಯ ಅಧಿಕೃತ ದೇವದಾಸಿ ಪಟ್ಟಿಯಲ್ಲಿ ಹೆಸರು ಸೇರದಿರುವ ಮಹಿಳೆಯರ ಹೆಸರನ್ನು ನೋಂದಣಿ ಮಾಡಿಸಬೇಕು ಎಂದು ಗ್ರಾಮಪಂಚಾಯಿತಿ ಸದಸ್ಯ ಹೆಚ್. ಕುಮಾರಸ್ವಾಮಿ ಮನವಿ ಸಲ್ಲಿಸಿದರು.
ಈ ಕುರಿತು ಅವರು ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದು, 58 ವರ್ಷ ವಯಸ್ಸಾದರೂ ಪಟ್ಟಿಯಲ್ಲಿ ಹೆಸರು ದಾಖಲಾಗಿಲ್ಲ ಎಂಬ ವಿಷಯವನ್ನು ಉಲ್ಲೇಖಿಸಿದ್ದಾರೆ. ಸಂಬಂಧಪಟ್ಟ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡುವಂತೆ ಅವರು ಒತ್ತಾಯಿಸಿದರು.
ಈ ಮನವಿಯನ್ನು ಬಳ್ಳಾರಿ ಜಿಲ್ಲಾ ಎಸ್‌ಪಿ ಕಚೇರಿಯಲ್ಲಿ ನಡೆದ ಎಸ್‌ಸಿ, ಎಸ್‌ಟಿ ಕುಂದುಕೊರತೆ ಸಭೆಯಲ್ಲಿ ಅಧಿಕೃತವಾಗಿ ಸಲ್ಲಿಸಲಾಯಿತು.