ಕಂಪ್ಲಿ ಪಟ್ಟಣದ ಕಂಪ್ಲಿ–ಕೊಟ್ಟಾಲ್ ರಸ್ತೆಯ ರಾಘವೇಂದ್ರ ಮಠಕ್ಕೆ ಹೋಗುವ ರಸ್ತೆಯ ವೃತ್ತಕ್ಕೆ ‘ಶ್ರೀ ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ವೃತ್ತ’ ಎಂದು ಹೆಸರು ನಾಮಕರಣ ಮಾಡುವ ಕುರಿತು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಪ್ರಸ್ತಾವನೆ ಮಂಡಿಸಲಾಗಿದೆ.ಈ ಕುರಿತು ಸಾರ್ವಜನಿಕರಿಂದ ಯಾವುದೇ ಸಲಹೆಗಳು ಅಥವಾ ಆಕ್ಷೇಪಣೆಗಳು ಇದ್ದಲ್ಲಿ, ಪ್ರಕಟಣೆಗೊಂಡ ದಿನಾಂಕದಿಂದ 30 ದಿನಗಳ ಒಳಗಾಗಿ ಲಿಖಿತ ರೂಪದಲ್ಲಿ ಕಂಪ್ಲಿ ಪುರಸಭೆ ಕಚೇರಿಗೆ ಸಲ್ಲಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.ಅವಧಿ ಮೀರಿ ಬಂದ ಮನವಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಕಂಪ್ಲಿ ಪುರಸಭೆಯ ಮುಖ್ಯಾಧಿಕಾರಿಗಳು ತಿಳಿಸಿದ್ದಾರೆ.