ಸರ್ಕಾರಿ-ಖಾಸಗಿ ಸಂಸ್ಥೆಗಳಲ್ಲಿ ಬೀದಿ ನಾಯಿಗಳು ವಾಸವಿರುವ ಬಗ್ಗೆ ಮಾಹಿತಿ ನೀಡಿ
ಕಂಪ್ಲಿ ಪುರಸಭೆ ವ್ಯಾಪ್ತಿಗೆ ಬರುವ ಸರ್ಕಾರಿ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಕ್ರೀಡಾ ಸಂಕೀರ್ಣಗಳು, ಬಸ್ ನಿಲ್ದಾಣಗಳ ಮುಖ್ಯಸ್ಥರು ಸರ್ವೋಚ್ಚ ನ್ಯಾಯಾಲಯ ನಿರ್ದೇಶನದಂತೆ ತಮ್ಮ ಸಂಸ್ಥೆಯ ಆವರಣದಲ್ಲಿ ಬೀದಿ ನಾಯಿಗಳು ವಾಸವಿದ್ದಲ್ಲಿ, ಪರಿಶೀಲಿಸಿ ಬೀದಿ ನಾಯಿಗಳ ಸಂಖ್ಯೆಯ ಬಗ್ಗೆ ಮುಖ್ಯಾಧಿಕಾರಿಗಳಿಗೆ ಮಾಹಿತಿ ನೀಡಬೇಕೆಂದು ನ.14,ಶುಕ್ರವಾರ ಕಂಪ್ಲಿ ಪುರಸಭೆ ಮುಖ್ಯಾಧಿಕಾರಿಗಳು ತಿಳಿಸಿದ್ದಾರೆ.
