Kampli : ನಗರದ ಮುಖ್ಯ ರಸ್ತೆಯಲ್ಲಿ ಬೈಕ್ ಸ್ಕಿಡ್ – ಬೈಕ್ ಸವಾರನಿಗೆ ಗಂಭೀರ ಗಾಯ

ನಗರದ ಮುಖ್ಯ ರಸ್ತೆಯಲ್ಲಿ ಬೈಕ್ ಸ್ಕಿಡ್ – ಬೈಕ್ ಸವಾರನಿಗೆ ಗಂಭೀರ ಗಾಯ

ಕಂಪ್ಲಿ ಪಟ್ಟಣದ SBI ಬ್ಯಾಂಕ್ ಬಳಿ ಬುಧವಾರ (ನ.19) ಮಧ್ಯಾಹ್ನ 1 ಗಂಟೆಯ ವೇಳೆಗೆ ಬೈಕ್ ಸ್ಕಿಡ್ ಆಗಿ ಸವಾರನೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಸಂಭವಿಸಿದೆ.

ಮಾಹಿತಿ ಪ್ರಕಾರ, ಗಾಯಾಳುವನ್ನು 12ನೇ ವಾರ್ಡಿನ ಯುವಕ ರವಿ ಎಂದು ಗುರುತಿಸಲಾಗಿದೆ.ಅಜಾಗರೂಕತೆಯಿಂದ ಬೈಕ್ ಚಲಾಯಿಸಿದ ಪರಿಣಾಮ ನಿಯಂತ್ರಣ ತಪ್ಪಿ ರಸ್ತೆ ಮೇಲೆ ಸ್ಕಿಡ್ ಆಗಿ ಬಿದ್ದಿದ್ದು, ತಲೆ ಹಾಗೂ ಮುಖಕ್ಕೆ ಗಂಭೀರ ಗಾಯಗಳು ಸಂಭವಿಸಿದ್ದವು.

ಗಾಯಾಳುವಿಗೆ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ.ಘಟನಾ ಸ್ಥಳಕ್ಕೆ ಕಂಪ್ಲಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Previous Post Next Post

Contact Form

f="https://unpkg.com/video.js/dist/video-js.css" rel="stylesheet">