Kampli : ಪಂಚ ಗ್ಯಾರಂಟಿ ಯೋಜನೆಗಳು ಪ್ರಾಮಾಣಿಕವಾಗಿ ಜಾರಿಗೆ– ಶ್ರೀನಿವಾಸ್ ರಾವ್

ಪಂಚ ಗ್ಯಾರಂಟಿ ಯೋಜನೆಗಳು ಪ್ರಾಮಾಣಿಕವಾಗಿ ಜಾರಿಗೆ– ಶ್ರೀನಿವಾಸ್ ರಾವ್

ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಕೊಟ್ಟ ಮಾತಿನಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿ “ಬಡವರ ಪರ ಸರ್ಕಾರ” ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ಕಂಪ್ಲಿ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಶ್ರೀನಿವಾಸ್ ರಾವ್ ಹೇಳಿದರು.

ವಾರ್ತಾ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ 2025-26ನೇ ಸಾಲಿನ ಕ್ಷೇತ್ರ ಪ್ರಚಾರ ಕಾರ್ಯಕ್ರಮದಡಿ 10 ದಿನಗಳ ಕಾಲ ಜಿಲ್ಲೆಾದ್ಯಂತ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಆಯೋಜಿಸಿರುವ ಪಂಚ ಗ್ಯಾರಂಟಿ ಹಾಗೂ ಇತರೆ ಅಭಿವೃದ್ಧಿ ಯೋಜನೆಗಳ ಕುರಿತು ಬೀದಿ ನಾಟಕ ಪ್ರದರ್ಶನಕ್ಕೆ ಸಣಾಪುರ ಮತ್ತು ಇಟಗಿ ಗ್ರಾಮ ಪಂಚಾಯಿತಿಗಳಲ್ಲಿ ಗುರುವಾರ ಚಾಲನೆ ನೀಡಿದರು.ಸರ್ಕಾರದ ಯೋಜನೆಗಳಿಂದ ಜನರ ಜೀವನಮಟ್ಟ ಸುಧಾರಣೆ ಕಂಡಿದೆ. ಬಡವರ ಪರ ಕಾಳಜಿ ಹೊಂದಿರುವ ಸರ್ಕಾರ ಜನರಿಗೆ ಅನುಕೂಲವಾಗುವ ಯೋಜನೆಗಳಿಗೆ ಆದ್ಯತೆ ನೀಡಿದೆ ಎಂದು ಹೇಳಿದರು.

ಶ್ರೀನಿವಾಸ್ ರಾವ್ ಅವರು ವಿವರಿಸುತ್ತಾ—

• ಶಕ್ತಿ ಯೋಜನೆ ಮೂಲಕ ಮಹಿಳೆಯರು, ಹೆಣ್ಣು ಮಕ್ಕಳು ಬಸ್‌ಗಳಲ್ಲಿ ಉಚಿತ ಸಂಚಾರ ಸೌಲಭ್ಯ ಪಡೆಯುತ್ತಿದ್ದಾರೆ.

• ಗೃಹಲಕ್ಷ್ಮಿ ಯೋಜನೆಯ 2000 ರೂ. ನೆರವಿನಿಂದ ಮನೆ ಯಜಮಾನಿಯರು ಸ್ವಾವಲಂಬಿ ಜೀವನಕ್ಕಾಗಿ ಬಲ ಪಡೆದುಕೊಳ್ಳುತ್ತಿದ್ದಾರೆ.

• ಗೃಹಜ್ಯೋತಿ ಅಡಿಯಲ್ಲಿ ನೋಂದಾಯಿತ ಮನೆಗಳಿಗೆ ಶೂನ್ಯ ಮೊತ್ತದ ವಿದ್ಯುತ್ ಬಿಲ್ ಲಭಿಸುತ್ತಿದೆ.

• ಅನ್ನಭಾಗ್ಯ ಯೋಜನೆಯಡಿ ಪ್ರತಿ ಕುಟುಂಬಕ್ಕೂ 10 ಕೆ.ಜಿ ಅಕ್ಕಿಯನ್ನು ವಿತರಿಸಲಾಗುತ್ತಿದೆ.

• ಯುವನಿಧಿ ಯೋಜನೆ ಮೂಲಕ ನಿರುದ್ಯೋಗಿ ಯುವತ–ಯುವಕರಿಗೆ ಆರ್ಥಿಕ ಸಹಾಯ ನೀಡಲಾಗುತ್ತಿದೆ ಎಂದು ಹೇಳಿದರು.

ನಂತರ ಚಿಗುರು ಕಲಾತಂಡದ ಹುಲುಗಪ್ಪ ಎಸ್.ಎಂ ನೇತೃತ್ವದಲ್ಲಿ ಎಚ್. ರಮೇಶ್, ಆನಂದ ಬಿ., ರಿಸ್ವಾಮಿ, ವೆಂಕಟೇಶ್ ಎ., ನವೀನ್ ಎಂ., ಗಂಗಮ್ಮ, ರುತಮ್ಮ ಸೇರಿದಂತೆ ಕಲಾವಿದರಿಂದ ಪಂಚ ಗ್ಯಾರಂಟಿ ಹಾಗೂ ವಿವಿಧ ಅಭಿವೃದ್ಧಿ ಯೋಜನೆಗಳ ಕುರಿತು ಆಕರ್ಷಕ ಬೀದಿ ನಾಟಕ ಪ್ರದರ್ಶನ ಜರುಗಿತು. ಜನರಿಂದ ಚಪ್ಪಾಳೆ ಪಡೆದುಕೊಂಡಿತು.

ಕಾರ್ಯಕ್ರಮದಲ್ಲಿ ಸಣಾಪುರ ಪ.ಸಂ. ಅಧ್ಯಕ್ಷ ರಮಣಯ್ಯ, ಉಪಾಧ್ಯಕ್ಷೆ ಸಾವಿತ್ರಿ, ಸದಸ್ಯರಾದ ವೀರನಗೌಡ ರೆಡ್ಡಿ, ಹೊನ್ನೂರಮ್ಮ, ಹುಲಿಗೆಮ್ಮ, ಮರಿಯಮ್ಮ, ಬಸವರಾಜ್ ಕುರುಗೋಡು ಸೇರಿದಂತೆ ಗ್ರಾಮಸ್ಥರು, ಹಿರಿಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Previous Post Next Post

Contact Form

f="https://unpkg.com/video.js/dist/video-js.css" rel="stylesheet">