ಪ್ರಬಂಧ ಸ್ಪರ್ಧೆಯಲ್ಲಿ ಬಿ. ಸುಷ್ಮಾ ರಾಜ್ಯಮಟ್ಟಕ್ಕೆ ಆಯ್ಕೆ
ಬಳ್ಳಾರಿ / ಕಂಪ್ಲಿ : ರಾಷ್ಟ್ರೀಯ ಮತದಾನ ದಿನಾಚರಣೆ (NVD) ಅಂಗವಾಗಿ ಡಿಸೆಂಬರ್ 24ರಂದು ಬುಧವಾರ ಬಳ್ಳಾರಿಯ ಸರಳಾದೇವಿ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಕಂಪ್ಲಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಿ.ಕಾಂ. ದ್ವಿತೀಯ ವರ್ಷದ ವಿದ್ಯಾರ್ಥಿನಿ ಬಿ. ಸುಷ್ಮಾ ಪ್ರಥಮ ಸ್ಥಾನ ಪಡೆದು, ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಈ ಸಾಧನೆಯ ಮೂಲಕ ಬಿ. ಸುಷ್ಮಾ ಅವರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಂಪ್ಲಿ ಹಾಗೂ ಕಂಪ್ಲಿ ತಾಲೂಕಿಗೆ ಹೆಮ್ಮೆ ತಂದಿದ್ದಾರೆ.
ವಿದ್ಯಾರ್ಥಿನಿಯ ಈ ಸಾಧನೆಗೆ ಕಾಲೇಜಿನ ಪ್ರಾಚಾರ್ಯರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ಎಲ್ಲಾ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿ, ಮುಂದಿನ ಹಂತಕ್ಕೂ ಶುಭಾಶಯ ಕೋರಿದ್ದಾರೆ.
