Ballari : ಜನಾರ್ದನ ರೆಡ್ಡಿ–ಭರತ್ ರೆಡ್ಡಿ ಬೆಂಬಲಿಗರ ನಡುವೆ ಗಲಾಟೆ: ಪೊಲೀಸರ ಲಾಠಿಜಾರ್ಜ್‌

ಜನಾರ್ದನ ರೆಡ್ಡಿ–ಭರತ್ ರೆಡ್ಡಿ ಬೆಂಬಲಿಗರ ನಡುವೆ ಗಲಾಟೆ: ಪೊಲೀಸರ ಲಾಠಿಜಾರ್ಜ್‌

ಬಳ್ಳಾರಿ :  ನಗರದಲ್ಲಿ ಜನಾರ್ದನ ರೆಡ್ಡಿ ಹಾಗೂ ಭರತ್ ರೆಡ್ಡಿ ಅವರ ಬೆಂಬಲಿಗರ ನಡುವೆ ಗುರುವಾರ ಸಂಜೆ ಗಲಾಟೆ ನಡೆದಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಲಾಠಿಜಾರ್ಜ್‌ ನಡೆಸಿದ ಘಟನೆ ನಡೆದಿದೆ.

ಜನಾರ್ದನ ರೆಡ್ಡಿ ಅವರ ನಿವಾಸದ ಮುಂದೆ ಬ್ಯಾನರ್ ಕಟ್ಟುವ ವಿಚಾರಕ್ಕೆ ಸಂಬಂಧಿಸಿ ಎರಡು ಗುಂಪುಗಳ ನಡುವೆ ವಾಗ್ವಾದ ಆರಂಭಗೊಂಡಿದ್ದು, ಬಳಿಕ ಗಲಾಟೆಗೆ ತಿರುಗಿದೆ. ಜನವರಿ 3ರಂದು ನಡೆಯಲಿರುವ ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬ್ಯಾನರ್‌ಗಳನ್ನು ಕಟ್ಟಲಾಗುತ್ತಿತ್ತು.

ಈ ವೇಳೆ ಬ್ಯಾನರ್‌ ಕಟ್ಟುವ ಕಾರ್ಯಕ್ಕೆ ವಿರೋಧ ವ್ಯಕ್ತವಾದ ತಕ್ಷಣವೇ ಗಲಾಟೆ ತೀವ್ರಗೊಂಡು, ಎರಡು ಗುಂಪುಗಳ ನಡುವೆ ಕಲ್ಲು ತೂರಾಟವೂ ನಡೆದಿದೆ. ಪರಿಸ್ಥಿತಿ ನಿಯಂತ್ರಣ ತಪ್ಪುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಗುಂಪನ್ನು ಚದುರಿಸಲು ಲಾಠಿಜಾರ್ಜ್‌ ನಡೆಸಿದ್ದಾರೆ.

ಘಟನೆಯಿಂದ ಕೆಲ ಕಾಲ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಹೆಚ್ಚಿನ ಪೊಲೀಸ್ ಬಂದೋಬಸ್ತ್‌ ನಿಯೋಜಿಸಲಾಗಿದೆ.

Previous Post Next Post

Contact Form

f="https://unpkg.com/video.js/dist/video-js.css" rel="stylesheet">