ಕಂಪ್ಲಿಯ 4ನೇ ವಾರ್ಡ್‌ನಲ್ಲಿ ಪೊಲೀಸ್ ಠಾಣೆ ವತಿಯಿಂದ ಜಾಗೃತಿ ಸಭೆ
ಕಂಪ್ಲಿ: ಪಟ್ಟಣದ 4ನೇ ವಾರ್ಡ್‌ನ ಅಂಬೇಡ್ಕರ್ ನಗರದ ಕೆಂಚಮ್ಮ ದೇವಿ ದೇವಸ್ಥಾನದ ಬಳಿ ಕಂಪ್ಲಿ ಪೊಲೀಸ್ ಠಾಣೆ ವತಿಯಿಂದ ದಲಿತ ಸಭೆ ಹಾಗೂ ಜಾಗೃತಿ ಸಭೆಯನ್ನು ಆಯೋಜಿಸಲಾಗಿತ್ತು. ಸಭೆಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ರವರ ಆಶಯಗಳು ಎಲ್ಲಾ ಸಮುದಾಯಗಳಿಗೆ ಮಾರ್ಗದರ್ಶಿಯಾಗಿದ್ದು, ಅವರು ಸಂವಿಧಾನದ ಮೂಲಕ ಎಲ್ಲರಿಗೂ ಸಮಾನ ಹಕ್ಕುಗಳನ್ನು ನೀಡಿದ್ದಾರೆ ಎಂದು ತಿಳಿಸಲಾಯಿತು.
ಸಭೆಯಲ್ಲಿ ಮಾತನಾಡಿದ ಪಿ.ಎಸ್.ಐ ಅವೀನಾಶ್ ಕಾಂಬ್ಳೆ ಅವರು ದಲಿತ ಸಭೆಯ ಉದ್ದೇಶ, ಕಾನೂನು ಅರಿವು ಹಾಗೂ ಪೋಕ್ಸೋ ಕಾಯ್ದೆಯ ಮಹತ್ವ ಕುರಿತು ವಿವರಿಸಿದರು.
ಎ.ಎಸ್.ಐ ಬಸವರಾಜ್ ಮಾತನಾಡಿ, ಎಲ್ಲ ಮಕ್ಕಳಿಗೂ ಶಿಕ್ಷಣ ಅತ್ಯಂತ ಮುಖ್ಯವಾಗಿದ್ದು ಕಡ್ಡಾಯವಾಗಿ ಶಾಲೆಗೆ ಕಳುಹಿಸಬೇಕು ಎಂದು ಹೇಳಿದರು. ಯಾವುದೇ ಅನುಚಿತ ಅಥವಾ ಅಹಿತಕರ ಘಟನೆಗಳು ಕಂಡುಬಂದಲ್ಲಿ ತಕ್ಷಣವೇ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಸಾರ್ವಜನಿಕರಿಗೆ ಮನವಿ ಮಾಡಿದರು. ಜೊತೆಗೆ ಬಾಲ್ಯ ವಿವಾಹ ಹಾಗೂ ಬಾಲ ಕಾರ್ಮಿಕ ಪದ್ಧತಿ ವಿರೋಧವಾಗಿ ಜಾಗೃತಿ ಮೂಡಿಸಿದರು.
ಈ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿ ಮಹೇಶ್, ಭಾರತರತ್ನ ಡಾ.ಬಿ.ಆರ್. ಅಂಬೇಡ್ಕರ್ ಸಂಘದ ಅಧ್ಯಕ್ಷ ಎಸ್. ರುದ್ರಮುನಿ, ವಾರ್ಡ್ ಮುಖಂಡರು ಸೇರಿದಂತೆ ಸ್ಥಳೀಯ ಸಾರ್ವಜನಿಕರು ಉಪಸ್ಥಿತರಿದ್ದರು.

