ಸೋಮಪ್ಪ ಪಾರ್ಕ್ ನಿರ್ವಹಣೆಗೆ ಪುರಸಭೆಯಿಂದ ಅರ್ಜಿ ಆಹ್ವಾನ
ಕಂಪ್ಲಿ : ಕಂಪ್ಲಿ ಪುರಸಭೆ ವ್ಯಾಪ್ತಿಯಲ್ಲಿರುವ ಸೋಮಪ್ಪ ಪಾರ್ಕ್‌ನ್ನು ನಿರ್ವಹಣೆ ಮಾಡಲು ಡೇ-ನಲ್ಮ್ ಅಭಿಯಾನದಡಿ ರಚಿತವಾದ ಅರ್ಹ ಮಹಿಳಾ ಸ್ವ-ಸಹಾಯ ಸಂಘಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಕೇಂದ್ರ ಸರ್ಕಾರದ ಪುರಸ್ಕೃತ ಯೋಜನೆಯಾದ ಅಮೃತ್ 2.0 ಅಭಿಯಾನದ ಅಮೃತ್ ಮಿತ್ರ ಕಾರ್ಯಕ್ರಮದ ತಾಂತ್ರಿಕೇತರ ಚಟುವಟಿಕೆಗಳಡಿ ಪಾರ್ಕ್ ನಿರ್ವಹಣೆ ಮಾಡಲು ಉದ್ದೇಶಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಅರ್ಹ ಮಹಿಳಾ ಸ್ವ-ಸಹಾಯ ಸಂಘಗಳು ಅಗತ್ಯ ದಾಖಲೆಗಳೊಂದಿಗೆ ನಿಗದಿತ ಅರ್ಜಿ ನಮೂನೆಯನ್ನು ಪೂರ್ತಿಗೊಳಿಸಿ, ಸಂಬಂಧಿತ ದಾಖಲೆಗಳನ್ನು ಸೇರಿಸಿ ಫೆಬ್ರವರಿ 16ರ ಸಂಜೆ 5.30 ಗಂಟೆಯೊಳಗೆ ಮುಚ್ಚಿದ ಲಕೋಟೆಯಲ್ಲಿ ಕಂಪ್ಲಿ ಪುರಸಭೆ ಕಚೇರಿಗೆ ಸಲ್ಲಿಸಬೇಕು.— - ಮುಖ್ಯಾಧಿಕಾರಿ ಮಲ್ಲಿಕಾರ್ಜುನ
Tags
ಟಾಪ್ ನ್ಯೂಸ್
