Ballari : ಬಳ್ಳಾರಿಯಲ್ಲಿ ಜಯಂತ್ಯೋತ್ಸವ ಅದ್ದೂರಿ ಆಚರಣೆಗೆ ಜಿಲ್ಲಾಡಳಿತ ಸನ್ನದ್ಧ



ಜಯಂತಿ ಪೂರ್ವಭಾವಿ ಸಭೆ - ಬಳ್ಳಾರಿ
ಸಿದ್ದಿ ಟಿವಿ ಸುದ್ದಿ

ಬಳ್ಳಾರಿಯಲ್ಲಿ ಜಯಂತ್ಯೋತ್ಸವ ಅದ್ದೂರಿ ಆಚರಣೆಗೆ ಸನ್ನದ್ಧ ಜಿಲ್ಲಾಡಳಿತ

ಬಳ್ಳಾರಿ | ಮಾ.23

ಹಸಿರು ಕ್ರಾಂತಿ ಹರಿಕಾರ ಹಾಗೂ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ್ ರಾಂ ಮತ್ತು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ಜಿಲ್ಲಾಡಳಿತ ಸಿದ್ಧವಾಗಿದೆ ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಿಳಿಸಿದ್ದಾರೆ.

ನಗರದ ನೂತನ ಜಿಲ್ಲಾಡಳಿತ ಭವನದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಏಪ್ರಿಲ್ 5 ರಂದು ಡಾ. ಬಾಬು ಜಗಜೀವನ್ ರಾಂ ಅವರ 119ನೇ ಜಯಂತಿ ಹಾಗೂ ಏಪ್ರಿಲ್ 14 ರಂದು ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಗುವುದು ಎಂದರು.

📌 ವಿವಿಧ ಇಲಾಖೆಗಳ ಸಮಿತಿ ರಚನೆ
📌 ಆಹ್ವಾನ ಪತ್ರಿಕೆ ಮುದ್ರಣೆ
📌 ಸರ್ಕಾರಿ ಕಚೇರಿಗಳಿಗೆ ದೀಪಾಲಂಕಾರ
📌 ಶಾಲೆ-ಕಾಲೇಜುಗಳಲ್ಲಿ ಪ್ರಬಂಧ ಸ್ಪರ್ಧೆ
📌 ವಿಶೇಷ ಉಪನ್ಯಾಸ ಕಾರ್ಯಕ್ರಮ

ಜಯಂತಿ ದಿನದಂದು ಸರ್ಕಾರಿ ನೌಕರರು ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಸೂಚನೆ ನೀಡಲಾಗಿದೆ.

ಡಾ. ಬಾಬು ಜಗಜೀವನ್ ರಾಂ ಜಯಂತಿ (ಏ.05)

ಮುನಿಸಿಪಲ್ ಕಾಲೇಜು ಮೈದಾನದಿಂದ ಮೆರವಣಿಗೆ ಆರಂಭವಾಗಿ ನಗರದ ಪ್ರಮುಖ ಮಾರ್ಗಗಳ ಮೂಲಕ ರಂಗಮಂದಿರದವರೆಗೆ ಸಾಗಲಿದೆ.

ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ (ಏ.14)

ಅಂಬೇಡ್ಕರ್ ವೃತ್ತದಿಂದ ಆರಂಭವಾಗುವ ಮೆರವಣಿಗೆ ಮುನಿಸಿಪಲ್ ಕಾಲೇಜು ಮೈದಾನದಲ್ಲಿ ಸಮಾರೋಪಗೊಳ್ಳಲಿದೆ.

ಸಭೆಯಲ್ಲಿ ಅಂಬೇಡ್ಕರ್ ವೃತ್ತದ ಸಂವಿಧಾನ ಉದ್ಯಾನವನ ಅಭಿವೃದ್ಧಿ ಹಾಗೂ ಪುತ್ಥಳಿ ಸ್ಥಾಪನೆ ಕುರಿತು ಪ್ರಸ್ತಾಪಿಸಲಾಯಿತು. ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಭರವಸೆ ನೀಡಿದರು.

ಇದೇ ವೇಳೆ ಪರಿಶಿಷ್ಟ ಜಾತಿ ಮತ್ತು ಪಂಗಡದವರ ಸಮಸ್ಯೆಗಳ ಕುರಿತು ಪ್ರತಿ ಮೂರು ತಿಂಗಳಿಗೆ ಸಭೆ ನಡೆಸಲಾಗುವುದು ಎಂದರು.

Previous Post Next Post

Contact Form

f="https://unpkg.com/video.js/dist/video-js.css" rel="stylesheet">