Kampli : ಬೈಕ್–ಟ್ರಾಕ್ಟರ್ ನಡುವೆ ಭೀಕರ ಅಪಘಾತ : ಮಹಿಳೆ ಸ್ಥಳದಲ್ಲೇ ಸಾವು



ಬೈಕ್–ಟ್ರಾಕ್ಟರ್ ಭೀಕರ ಅಪಘಾತ
SIDDI TV NEWS
ಕಂಪ್ಲಿ: ಬೈಕ್–ಟ್ರಾಕ್ಟರ್ ಭೀಕರ ಅಪಘಾತ — ಮಹಿಳೆ ಸ್ಥಳದಲ್ಲೇ ಸಾವು
ಪ್ರಕಟನೆ ದಿನಾಂಕ: April 25, 2026
ಕಂಪ್ಲಿ ತಾಲೂಕಿನ ದೇವಸಮುದ್ರ ಗ್ರಾಮದ ಬಳಿ ಬೈಕ್ ಮತ್ತು ಟ್ರಾಕ್ಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್‌ನಲ್ಲಿದ್ದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ನಡೆದಿದೆ.

ಮಾಹಿತಿ ಪ್ರಕಾರ, ಯಲಬುರ್ಗಾ ತಾಲೂಕಿನ ಮ್ಯಾದನರಿ ಗ್ರಾಮದಿಂದ ದೇವಸಮುದ್ರದಲ್ಲಿರುವ ಸಂಬಂಧಿಕರ ಮನೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ತಾಯಿ ಮತ್ತು ಮಗನಿಗೆ, ದೇವಸಮುದ್ರದಿಂದ ಮುದ್ದಾಪುರ ಕಡೆಗೆ ಸಾಗುತ್ತಿದ್ದ ಟ್ರಾಕ್ಟರ್ ಚಾಲಕನ ನಿಯಂತ್ರಣ ತಪ್ಪಿ ಢಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.

ಢಿಕ್ಕಿಯ ತೀವ್ರತೆಗೆ ಬೈಕ್‌ನಲ್ಲಿದ್ದ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುವನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮೃತದೇಹವನ್ನು ಕಂಪ್ಲಿಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆಯುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಘಟನೆ ಸ್ಥಳಕ್ಕೆ ಕಂಪ್ಲಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.
Previous Post Next Post

Contact Form

f="https://unpkg.com/video.js/dist/video-js.css" rel="stylesheet">