Kampli : ರೈತನ ಮಗಳಿಗೆ ಒಲಿದ ಚಿನ್ನದ ಪದಕ



ರೈತನ ಮಗಳಿಗೆ ಒಲಿದ ಚಿನ್ನದ ಪದಕ

ಕಂಪ್ಲಿ, ಏ.19 : ಕಂಪ್ಲಿ ನಗರದ ವಿನೂತನ ಮಹಿಳಾ ಪದವಿ ಮಹಾವಿದ್ಯಾಲಯ ವಿದ್ಯಾರ್ಥಿನಿ ಇಂದ್ರಜಾ ಎಮ್ಮಿಗನೂರು ಅರ್ಥಶಾಸ್ತ್ರ ವಿಭಾಗದಲ್ಲಿ ವಿಶ್ವವಿದ್ಯಾಲಯ ಮಟ್ಟದಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದು ಚಿನ್ನದ ಪದಕಕ್ಕೆ ಭಾಜನರಾಗಿದ್ದಾಳೆ.

ಇತ್ತೀಚೆಗೆ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ 2025-26ನೇ ಸಾಲಿನ ಪದವಿ ಫಲಿತಾಂಶ ಪ್ರಕಟಿಸಿದ್ದು, ಬಿಎ ವಿಭಾಗದಲ್ಲಿ ಇಂದ್ರಜಾ 91.38 ಶೇಕಡಾ ಅಂಕಗಳನ್ನು ಪಡೆದು ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾಳೆ.

ಗ್ರಾಮೀಣ ಭಾಗದ ವಿದ್ಯಾರ್ಥಿನಿಯಾಗಿರುವ ಇಂದ್ರಜಾ ರೈತನ ಮಗಳಾಗಿದ್ದು, ತನ್ನ ಮೊದಲ ಪ್ರಯತ್ನದಲ್ಲೇ ಚಿನ್ನದ ಪದಕ ಪಡೆದು ಕಾಲೇಜಿನ ಹಾಗೂ ಕಂಪ್ಲಿ ತಾಲೂಕಿನ ಕೀರ್ತಿಯನ್ನು ಹೆಚ್ಚಿಸಿದ್ದಾಳೆ.

ವಿಶ್ವವಿದ್ಯಾಲಯದ 17ನೇ ಘಟಿಕೋತ್ಸವ ಸಮಾರಂಭವು ಏಪ್ರಿಲ್ 21 ರಂದು ನಡೆಯಲಿದ್ದು, ಈ ವೇಳೆ ಇಂದ್ರಜಾಗೆ ಅಧಿಕೃತವಾಗಿ ಚಿನ್ನದ ಪದಕ ಪ್ರದಾನ ಮಾಡಲಾಗುತ್ತದೆ.

ವಿದ್ಯಾರ್ಥಿನಿಯ ಸಾಧನೆಗೆ ಕಾಲೇಜಿನ ಪ್ರಾಚಾರ್ಯ ಮದ್ದಾನೆಪ್ಪ ಬಿಡನಾಳ, ವಿ ವಿ ಎಸ್ ಎಸ್ ಟ್ರಸ್ಟ್ ಅಧ್ಯಕ್ಷೆ ರಾಜಮ್ಮ ಹುಲಗಪ್ಪ, ಕಾರ್ಯದರ್ಶಿ ಪ್ರಕಾಶ್ ಜಿ ನಾಯಕ್ ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

FLASH : ರೈತನ ಮಗಳಾದ ಇಂದ್ರಜಾ ಎಮ್ಮಿಗನೂರು ವಿಶ್ವವಿದ್ಯಾಲಯ ಮಟ್ಟದಲ್ಲಿ ಚಿನ್ನದ ಪದಕ ಪಡೆದು ಕಂಪ್ಲಿ ತಾಲೂಕಿನ ಕೀರ್ತಿಯನ್ನು ಹೆಚ್ಚಿಸಿದ್ದಾಳೆ.
Previous Post Next Post

Contact Form

f="https://unpkg.com/video.js/dist/video-js.css" rel="stylesheet">