SSLC :ನಾಳೆ SSLC ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು : ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿರುವ 2025-26 ನೇ ಸಾಲಿನ ಎಸ್ಎಸ್ಎಲ್ ಸಿ (SSLC) ಪರೀಕ್ಷೆಯ ಫಲಿತಾಂಶ ಏ.23 (ಗುರುವಾರ ) ಪ್ರಕಟಗೊಳ್ಳಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಮಾಹಿತಿ ನೀಡಿದೆ.

ಈಗಾಗಲೇ ಮೌಲ್ಯಮಾಪನ ಪ್ರಕ್ರಿಯೆ ಸಂಪೂರ್ಣವಾಗಿ ಮುಗಿದಿದ್ದು,ಮಾರ್ಚ್ ಮತ್ತು ಏಪ್ರಿಲ್ ತಿಂಗಳಿನಲ್ಲಿ ನಡೆದಿರುವ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯದಾದ್ಯಂತ ಸುಮಾರು 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಹಾಜರಾಗಿ ಪರೀಕ್ಷೆ ಬರೆದಿದ್ದಾರೆ.ಈಗ ಫಲಿತಾಂಶ ಪ್ರಕಟವಾಗುವ ಮಾಹಿತಿ ಮೂಲಗಳಿಂದ ತಿಳಿದ್ದು ಬಂದಿದ್ದು ನಾಳೆ ಈ ಬಗ್ಗೆ ಮಂಡಳಿಯ ಕಚೇರಿಯಲ್ಲಿ 12 ಗಂಟೆಗೆ ಸುದ್ದಿಗೋಷ್ಟಿ ನಡೆಸಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಫಲಿತಾಂಶ ಪ್ರಕಟಿಸಲಿದ್ದಾರೆ.

ಫಲಿತಾಂಶ ವೀಕ್ಷಣೆಗೆ http://karresults.nic.in/ ಮತ್ತು ಕರ್ನಾಟಕ ಒನ್ ಆ್ಯಪ್ ನಲ್ಲಿ ವೀಕ್ಷಿಸಬಹುದಾಗಿದೆ.

Previous Post Next Post

Contact Form

f="https://unpkg.com/video.js/dist/video-js.css" rel="stylesheet">