Kampli : ನಾಳೆ ದೈನಂದಿನ ಬಸ್ ಕಾರ್ಯಾಚರಣೆಯಲ್ಲಿ ವ್ಯತ್ಯಯ

ಮೇ 09 ರಂದು ದೈನಂದಿನ ಬಸ್ ಕಾರ್ಯಾಚರಣೆಯಲ್ಲಿ ವ್ಯತ್ಯಯ

ಇದೇ ಮೇ 09 ರಂದು ಚಿತ್ರದುರ್ಗ ನಗರದಲ್ಲಿ ಬಿಎಸ್‌ವೈ ಅಭಿಮಾನೋತ್ಸವ ಕಾರ್ಯಕ್ರಮದ ಅಂಗವಾಗಿ ಜನರನ್ನು ಕರೆತರಲು ಬಳ್ಳಾರಿ ವಿಭಾಗದಿಂದ ಒಟ್ಟು 200 ಬಸ್ಸುಗಳನ್ನು ಚಿತ್ರದುರ್ಗ ಜಿಲ್ಲೆಗೆ ಸಾಂಧರ್ಬಿಕ ಒಪ್ಪಂದದ ಮೇಲೆ ಒದಗಿಸಲಾಗುತ್ತಿದ್ದು, ಮೇ 09 ರಂದು ಬಳ್ಳಾರಿ, ಸಿರುಗುಪ್ಪ, ತೆಕ್ಕಲಕೋಟೆ, ಕುರುಗೋಡು, ಕುಡತಿನಿ, ಕಂಪ್ಲಿ, ಸಂಡೂರು ಭಾಗದಿಂದ ವಿವಿಧ ಸ್ಥಳಗಳಿಗೆ ತೆರಳುವ ದೈನಂದಿನ ಬಸ್ ಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯವಾಗಲಿದೆ.

ಹಾಗಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕ ಪ್ರಯಾಣಿಕರು ಸಹಕರಿಸಬೇಕು ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಳ್ಳಾರಿ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

-------------

Previous Post Next Post

Contact Form

f="https://unpkg.com/video.js/dist/video-js.css" rel="stylesheet">