Kampli : ಕಂಪ್ಲಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಬೂತ್ ಡೇ ಕಾರ್ಯಕ್ರಮ

ಕಂಪ್ಲಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಬೂತ್ ಡೇ ಕಾರ್ಯಕ್ರಮ

ಕಂಪ್ಲಿ: ರಾಷ್ಟ್ರೀಯ ಪಲ್ಸ್ ಪೋಲಿಯೋ ಬೂತ್ ಡೇ ಅಂಗವಾಗಿ ಇಂದು ಕಂಪ್ಲಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕಂಪ್ಲಿ ತಾಲೂಕು ದಂಡಾಧಿಕಾರಿಗಳಾದ ಮಂಜುನಾಥ ಜೂಗಲ್ ಅವರು ಮಗುವಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ತಾಲೂಕು ಆರೋಗ್ಯಾಧಿಕಾರಿಗಳಾದ ಡಾ. ಅರುಣ್ ಜಿ., ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿಗಳಾದ ಡಾ. ರವೀಂದ್ರ ಕನಕೇರಿ, ವೈದ್ಯಾಧಿಕಾರಿಗಳಾದ ಡಾ. ಭರತ್ ಪಿ., ಬ್ಲಾಕ್ ಆರೋಗ್ಯ ಶಿಕ್ಷಣಾಧಿಕಾರಿ (BHEO), ಹಿರಿಯ ಆರೋಗ್ಯ ನಿರೀಕ್ಷಕರು (Sr. HIO), ಆರೋಗ್ಯ ನಿರೀಕ್ಷಕರು (HIO), ಶುಶ್ರೂಷಣಾಧಿಕಾರಿಗಳು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಪೋಷಕರು ತಮ್ಮ ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಿ, ಮಕ್ಕಳನ್ನು ಪೋಲಿಯೋ ಮುಕ್ತವಾಗಿಡಲು ಸಹಕರಿಸುವಂತೆ ಆರೋಗ್ಯ ಇಲಾಖೆ ಮನವಿ ಮಾಡಿದೆ.


Previous Post Next Post

Contact Form

f="https://unpkg.com/video.js/dist/video-js.css" rel="stylesheet">