ಶಾಸಕ ಜೆ.ಎನ್. ಗಣೇಶ್ ಅವರಿಗೆ ಸಚಿವ ಸ್ಥಾನ ಸಿಗಲಿ: ಶ್ರೀದೇವಿ ಹೊನ್ನಳ್ಳಿ ವಿಶೇಷ ಪ್ರಾರ್ಥನೆ
ಕಂಪ್ಲಿ: ಕಂಪ್ಲಿ ತಾಲೂಕು ಬ್ಲಾಕ್ ಕಾಂಗ್ರೆಸ್ ಮಹಿಳಾ ಉಪಾಧ್ಯಕ್ಷೆ ಶ್ರೀದೇವಿ ಹೊನ್ನಳ್ಳಿ ಅವರು ಶಾಸಕ ಜೆ.ಎನ್. ಗಣೇಶ್ ಅವರಿಗೆ ಸಚಿವ ಸ್ಥಾನ ದೊರೆಯಲಿ ಎಂದು ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಇತ್ತೀಚೆಗೆ ಕಂಪ್ಲಿಯ ಶ್ರೀ ಉದ್ಭವ ಗಣಪತಿ ದೇವಸ್ಥಾನದಿಂದ ಮುಚಿಗೇರ ಮಾರೆಮ್ಮ ದೇವಿ ದೇವಸ್ಥಾನದವರೆಗೆ ದೀರ್ಘದಂಡ ನಮಸ್ಕಾರ ಸಲ್ಲಿಸುವ ಮೂಲಕ ದೇವರಲ್ಲಿ ಪ್ರಾರ್ಥನೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಶಾಸಕ ಜೆ.ಎನ್. ಗಣೇಶ್ ಅವರು ಕ್ಷೇತ್ರದಲ್ಲಿ ಧಾರ್ಮಿಕ, ಶೈಕ್ಷಣಿಕ, ಕೃಷಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುತ್ತಿದ್ದು, ಜನಸೇವೆಯಲ್ಲಿ ಸದಾ ಮುಂಚೂಣಿಯಲ್ಲಿದ್ದಾರೆ. ಅವರ ಸೇವೆಯನ್ನು ಗುರುತಿಸಿ ಸಿಎಂ ಡಿಕೆಶಿ ರವರು ರಾಜ್ಯ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ದೇವರಲ್ಲಿ ಪ್ರಾರ್ಥಿಸಿದ್ದಾಗಿ ತಿಳಿಸಿದರು. ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶಾಸಕ ಗಣೇಶ್ ಅವರ ನಾಯಕತ್ವ ಇನ್ನಷ್ಟು ಬಲವಾಗಲಿ ಹಾಗೂ ಅವರಿಗೆ ಸಚಿವ ಸ್ಥಾನ ದೊರೆತು ಜನಸೇವೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಮುಂದುವರಿಸಲು ಅವಕಾಶ ಸಿಗಲಿ ಎಂದು ಆಶಿಸಿದರು.
