Kampli : ಕರ್ನಾಟಕ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ

ಕರ್ನಾಟಕ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ

ಕಂಪ್ಲಿ: ಪತ್ರಕರ್ತರ ದಿನಾಚರಣೆಯ ಅಂಗವಾಗಿ ಕರ್ನಾಟಕ ಪತ್ರಕರ್ತರ ಸಂಘದ ಜಿಲ್ಲಾ ಹಾಗೂ ಕಂಪ್ಲಿ ತಾಲೂಕು ಘಟಕದ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಗಣ್ಯರನ್ನು ಗೌರವಿಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಕರ್ನಾಟಕ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಯಾಳ್ಪಿ ವಲಿಭಾಷಾ ಮಾತನಾಡಿ, ಪತ್ರಕರ್ತರು ಸಮಾಜದ ಕಣ್ಣು ಮತ್ತು ಕಿವಿಯಾಗಿದ್ದು, ಸತ್ಯ ಹಾಗೂ ನಿಷ್ಪಕ್ಷಪಾತ ಸುದ್ದಿಗಳನ್ನು ಜನರಿಗೆ ತಲುಪಿಸುವ ಮಹತ್ತರ ಜವಾಬ್ದಾರಿಯನ್ನು ಹೊತ್ತಿದ್ದಾರೆ ಎಂದು ಹೇಳಿದರು. ಪತ್ರಕರ್ತರ ನೋವು-ನಲಿವು, ವೃತ್ತಿಯಲ್ಲಿ ಎದುರಾಗುವ ಸವಾಲುಗಳು ಹಾಗೂ ಅವರ ಹಕ್ಕು-ಸೌಲಭ್ಯಗಳ ಬಗ್ಗೆ ಸಂಘ ಸದಾ ಕಾಳಜಿ ವಹಿಸುತ್ತಿದ್ದು, ಪತ್ರಕರ್ತರ ಕಲ್ಯಾಣಕ್ಕಾಗಿ ನಿರಂತರವಾಗಿ ಕೆಲಸ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಪತ್ರಕರ್ತರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದುರ್ಗೇಶ್ ಯಾಧವ್, ಜಿಲ್ಲಾ ಉಪಾಧ್ಯಕ್ಷರಾದ ಬಜಾರಪ್ಪ, ವೀರಭದ್ರಗೌಡ, ಗಿರೀಶ್ ಕುಮಾರ್ ಉಪಸ್ಥಿತರಿದ್ದರು.

ಕಂಪ್ಲಿ ತಾಲೂಕು ಘಟಕದ ಅಧ್ಯಕ್ಷ ರಘುವೀರ್ ಸಿದ್ದಿ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಂಪ್ಲಿ ತಾಲೂಕು ಪಂಚಾಯತಿಯ ಸಹಾಯಕ ನಿರ್ದೇಶಕ ಮಲ್ಲನಗೌಡ, ವೈದ್ಯಾಧಿಕಾರಿ ಡಾ. ರವೀಂದ್ರ ಕನಕೇರಿ, ಎ.ಎಸ್.ಐ ಬಸವರಾಜ್, ಲೋಕೋಪಯೋಗಿ ಇಲಾಖೆಯ ಆನಂದ್, ಜೆಸ್ಕಾಂ ಇಲಾಖೆಯ ಭೀಮೇಶ್, ವೀರಶೈವ ಲಿಂಗಾಯತ ಮಹಾವೇದಿಕೆಯ ಜಿಲ್ಲಾಧ್ಯಕ್ಷ ಹೊಸಕೋಟೆ ಜಗದೀಶ್, ಉಪನ್ಯಾಸಕರಾದ ಸಿದ್ದಣ್ಣ ಪರಮೇಶ್ವರ್, ಉಪ ಪ್ರಾಚಾರ್ಯೆ ಸುಜಾತ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಎಲ್. ರಾಘವೇಂದ್ರ, ವಕೀಲ ಸುದರ್ಶನ ರೆಡ್ಡಿ, ಕರವೇ ಅಧ್ಯಕ್ಷ ಬಳೆ ಮಲ್ಲಿಕಾರ್ಜುನ, ಹಿರಿಯ ಪತ್ರಕರ್ತ ವೆಂಕಟೇಶ್, ದಲಿತ ಮುಖಂಡರಾದ ಕೆ. ಲಕ್ಷ್ಮಣ, ಮರಿಸ್ವಾಮಿ, ಎ.ಎಸ್. ಯಲ್ಲಪ್ಪ ಹಾಗೂ ತಿಪ್ಪೇಸ್ವಾಮಿ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿ ಶುಭಾಶಯ ಕೋರಿದರು.

ಇದೇ ವೇಳೆ ಕಂಪ್ಲಿ ತಾಲೂಕು ಘಟಕದ ಉಪಾಧ್ಯಕ್ಷ ಸಚ್ಚಿದಾನಂದ, ಪ್ರಧಾನ ಕಾರ್ಯದರ್ಶಿ ಹೆಚ್. ಮರಿಯಪ್ಪ, ಖಜಾಂಚಿ ಚನ್ನಕೇಶವ, ಸಲಹಾ ಸದಸ್ಯ ಟಿ.ಹೆಚ್.ಎಂ.ರಾಜಕುಮಾರ್ ಸೇರಿದಂತೆ ಸದಸ್ಯರು ಇದ್ದರು.

ಕಾರ್ಯಕ್ರಮದಲ್ಲಿ ಪತ್ರಕರ್ತರ ಸಮಾಜಮುಖಿ ಸೇವೆಯನ್ನು ಸ್ಮರಿಸಿ, ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿ ಮಾಧ್ಯಮದ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಗಣ್ಯರು ಅಭಿಪ್ರಾಯಪಟ್ಟರು.

 

Previous Post Next Post

Contact Form

f="https://unpkg.com/video.js/dist/video-js.css" rel="stylesheet">