Kampli : ರಾಯಚೂರು ಜಿಲ್ಲೆಯಲ್ಲಿ ನಡೆದ 2 ಪ್ರಕರಣಗಳ ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಆ.25ರಂದು ಕಂಪ್ಲಿಯಲ್ಲಿ ಪ್ರತಿಭಟನೆ



ರಾಯಚೂರು ಜಿಲ್ಲೆಯಲ್ಲಿ ನಡೆದ 2 ಪ್ರಕರಣಗಳ ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಆ.25ರಂದು ಕಂಪ್ಲಿಯಲ್ಲಿ ಪ್ರತಿಭಟನೆ

ಕಂಪ್ಲಿ: ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಸುಂಕೇಶ್ವರಹಾಳ ಕ್ರಾಸ್ ಬಳಿ ನಡೆದ ದಲಿತ ಯುವಕ ಭೂಮಾನಂದ ಕೊಲೆ ಪ್ರಕರಣ ಹಾಗೂ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ ನಡೆದ ಯುವತಿ ಅಶ್ವಿನಿ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಆ.25ರಂದು ಕಂಪ್ಲಿಯಲ್ಲಿ ನಡೆಯಲಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ಇಂದು ಪೂರ್ವಭಾವಿ ಸಭೆ ನಡೆಯಿತು.

ಕಂಪ್ಲಿ ತಾಲೂಕಿನ ದಲಿತಪರ ಸಂಘಟನೆಗಳ ಒಕ್ಕೂಟ, ಸಮಾನಮನಸ್ಕರು ಹಾಗೂ ಪ್ರಗತಿಪರ ಸಂಘಟನೆಗಳ ಮುಖಂಡರು ಸಭೆಯಲ್ಲಿ ಭಾಗವಹಿಸಿ ಪ್ರತಿಭಟನೆಯ ರೂಪುರೇಷೆ ಕುರಿತು ಚರ್ಚಿಸಿದರು. ಆ.25ರಂದು ಒನಕೆ ಓಬವ್ವ ಸರ್ಕಲ್‌ನಿಂದ ಅಂಬೇಡ್ಕರ್ ಸರ್ಕಲ್‌ವರೆಗೆ ಮೃತರ ಭಾವಚಿತ್ರಗಳೊಂದಿಗೆ ಮೆರವಣಿಗೆ ನಡೆಸಿ, ಅಂಬೇಡ್ಕರ್ ಸರ್ಕಲ್‌ನಲ್ಲಿ ಶ್ರದ್ಧಾಂಜಲಿ ಸಲ್ಲಿಸಿದ ಬಳಿಕ ತಹಶೀಲ್ದಾರರಿಗೆ ಮನವಿ ಸಲ್ಲಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.

ಮೃತ ಭೂಮಾನಂದ ಹಾಗೂ ಅಶ್ವಿನಿ ಅವರ ಕುಟುಂಬಗಳಿಗೆ ನ್ಯಾಯ ಒದಗಿಸುವುದು, ಸೂಕ್ತ ಪರಿಹಾರ ಹಾಗೂ ಸರ್ಕಾರಿ ಸೌಲಭ್ಯಗಳನ್ನು ನೀಡುವಂತೆ ಸರ್ಕಾರವನ್ನು ಒತ್ತಾಯಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮೃತರ ಕುಟುಂಬಗಳಿಗೆ ನ್ಯಾಯ ಒದಗಿಸುವ ಹೋರಾಟಕ್ಕೆ ಬೆಂಬಲ ನೀಡುವಂತೆ ಸಂಘಟಕರು ಕರೆ ನೀಡಿದರು.

ವರದಿ : ಸಿದ್ದಿ ಟಿವಿ ರಘುವೀರ್
Previous Post Next Post

Contact Form

f="https://unpkg.com/video.js/dist/video-js.css" rel="stylesheet">