ಚಪ್ಪರದಳ್ಳಿ ಏರಿಯಾದಲ್ಲಿ ವಿಜೃಂಭಣೆಯಿಂದ 2ನೇ ವರ್ಷದ ಗಣೇಶ ಪ್ರತಿಷ್ಠಾಪನೆ, ಅನ್ನಸಂತರ್ಪಣೆ
ಕಂಪ್ಲಿ, ಸೆ.16: ಬೆಳಗೋಡು ಗ್ರಾಮದ 3ನೇ ವಾರ್ಡ್‌ನ ಚಪ್ಪರದಳ್ಳಿ ಏರಿಯಾದಲ್ಲಿ ವರಸಿದ್ದೇಶ್ವರ ಯುವಕರ ಮಂಡಳಿ ವತಿಯಿಂದ 2ನೇ ವರ್ಷದ ಶ್ರೀ ಗಣೇಶ ಪ್ರತಿಷ್ಠಾಪನೆ ಕಾರ್ಯಕ್ರಮವನ್ನು ಭಕ್ತಿಪೂರ್ವಕವಾಗಿ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.
ಬೆಳಗ್ಗಿನಿಂದಲೇ ಗಣೇಶ ಭಕ್ತರು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪೂಜಾ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು. ಪ್ರತಿಷ್ಠಾಪಿತ ಗಣೇಶ ಮೂರ್ತಿಗೆ ವಿಶೇಷ ಅಲಂಕಾರ ಮಾಡಲಾಗಿದ್ದು, ವೇದಮಂತ್ರಗಳೊಂದಿಗೆ ಪೂಜೆ ಸಲ್ಲಿಸಲಾಯಿತು. ಭಕ್ತರು ಗಣೇಶನ ದರ್ಶನ ಪಡೆದು ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ವಿಶೇಷ ಪೂಜೆ, ಆರತಿ ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಲಾಯಿತು. ನಂತರ ಭಕ್ತಾದಿಗಳಿಗೆ ಮತ್ತು ಸಾರ್ವಜನಿಕರಿಗೆ ಅನ್ನಸಂತರ್ಪಣೆ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ನೂರಾರು ಮಂದಿ ಭಾಗವಹಿಸಿ ಪ್ರಸಾದ ಸ್ವೀಕರಿಸಿದರು.
ಗ್ರಾಮದಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಭಕ್ತಿ ವಾತಾವರಣ ನಿರ್ಮಾಣವಾಗಿದ್ದು, ಯುವಕರು ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸಿದರು. ವರಸಿದ್ದೇಶ್ವರ ಯುವಕರ ಮಂಡಳಿಯ ಸದಸ್ಯರು, ಮುಖಂಡರು, ಗ್ರಾಮಸ್ಥರು ಹಾಗೂ ಮಹಿಳೆಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಪ್ರತಿವರ್ಷವೂ ಇದೇ ರೀತಿಯಲ್ಲಿ ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಮಾಜದಲ್ಲಿ ಒಗ್ಗಟ್ಟು ಬೆಳೆಸುವ ಉದ್ದೇಶ ಹೊಂದಿರುವುದಾಗಿ ಮಂಡಳಿಯ ಪದಾಧಿಕಾರಿಗಳು ತಿಳಿಸಿದರು.
