Ballari : ನ.2ರಿಂದ ಬಳ್ಳಾರಿ ಜಿಲ್ಲೆಯಲ್ಲಿ ಹೆಲ್ಮೆಟ್ ಕಡ್ಡಾಯ!


ನ.2ರಿಂದ ಬಳ್ಳಾರಿ ಜಿಲ್ಲೆಯಲ್ಲಿ ಹೆಲ್ಮೆಟ್ ಕಡ್ಡಾಯ!
ಹೆಲ್ಮೆಟ್ ಧರಿಸದ ಸವಾರರಿಗೆ ಪೊಲೀಸರಿಂದ ಕಟ್ಟುನಿಟ್ಟಿನ ತಪಾಸಣೆ – ಅಪ್ರಾಪ್ತರ ವಾಹನ ಚಾಲನೆಗೂ ಕಡಿವಾಣ
ಬಳ್ಳಾರಿ, ಅ.29 | 

ಬಳ್ಳಾರಿ: ಜಿಲ್ಲೆಯಲ್ಲಿ ರಸ್ತೆ ಅಪಘಾತಗಳು ಹಾಗೂ ಸಾವು-ನೋವುಗಳನ್ನು ತಡೆಗಟ್ಟುವ ಉದ್ದೇಶದಿಂದ ನವೆಂಬರ್ 2ರಿಂದ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ. ಪೆನ್ನೇಕರ್ ಅವರು ತಿಳಿಸಿದ್ದಾರೆ.

ನವೆಂಬರ್ 2ರಿಂದ ಹೆಲ್ಮೆಟ್ ನಿಯಮ ಕಟ್ಟುನಿಟ್ಟಾಗಿ ಜಾರಿ. ಅಪ್ರಾಪ್ತರು ವಾಹನ ಚಾಲನೆ ಮಾಡಿದರೂ ಕಠಿಣ ಕ್ರಮ!

ಬಳ್ಳಾರಿ ಜಿಲ್ಲೆಯಲ್ಲಿ ಈ ಹಿಂದೆ ಜೂನ್ 1ರಿಂದಲೇ ಹೆಲ್ಮೆಟ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿತ್ತು. ಆರಂಭದಲ್ಲಿ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತಾದರೂ, ನಂತರದ ದಿನಗಳಲ್ಲಿ ಪೊಲೀಸರ ತಪಾಸಣೆ ಕಡಿಮೆಯಾದ ಕಾರಣ ನಗರ ಪ್ರದೇಶಗಳಲ್ಲಿ ಹೆಲ್ಮೆಟ್ ಧರಿಸುವವರ ಸಂಖ್ಯೆ ಮತ್ತೆ ಇಳಿಮುಖವಾಗಿತ್ತು.

ಇತ್ತೀಚೆಗೆ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತಗಳನ್ನು ಪರಿಶೀಲಿಸಿದಾಗ, ಹೆಲ್ಮೆಟ್ ಧರಿಸದ ಕಾರಣ ತಲೆಗೆ ತೀವ್ರ ಗಾಯಗಳಾಗಿ ಅನೇಕ ಸವಾರರು ಸಾವನ್ನಪ್ಪಿರುವುದು ಮತ್ತು ಅಂಗವೈಕಲ್ಯಕ್ಕೆ ತುತ್ತಾಗಿರುವುದು ಕಂಡುಬಂದಿದೆ.

ಈ ಹಿನ್ನೆಲೆಯಲ್ಲಿ ವಾಹನ ಸವಾರರ ಸುರಕ್ಷತೆಯ ದೃಷ್ಟಿಯಿಂದ ನವೆಂಬರ್ 2ರಿಂದ ಹೆಲ್ಮೆಟ್ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು. ಅಪ್ರಾಪ್ತ ವಯಸ್ಕರು ವಾಹನ ಚಾಲನೆ ಮಾಡುವುದರ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಿ, ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ತಮ್ಮ ಅಮೂಲ್ಯ ಜೀವವನ್ನು ರಕ್ಷಿಸಿಕೊಳ್ಳಬೇಕೆಂದು ಅವರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

Previous Post Next Post

Contact Form

f="https://unpkg.com/video.js/dist/video-js.css" rel="stylesheet">