ಬಳ್ಳಾರಿಗೆ ನವೆಂಬರ್ 1ರಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಭೇಟಿ
71ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಲಿರುವ ಸಚಿವರು
ಬಳ್ಳಾರಿ, ಅ.31: ವಸತಿ ಸಚಿವ ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ಅವರು ನವೆಂಬರ್ 1ರಂದು ಬಳ್ಳಾರಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಅಂದು ಬೆಳಿಗ್ಗೆ 9 ಗಂಟೆಗೆ ಬಳ್ಳಾರಿ ನಗರದ ಡಾ. ರಾಜ್‌ಕುಮಾರ್ ರಸ್ತೆಯಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ಆಯೋಜಿಸಿರುವ 71ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಧ್ವಜಾರೋಹಣ ನೆರವೇರಿಸಲಿದ್ದಾರೆ.
ಬಳಿಕ ಬೆಳಿಗ್ಗೆ 11:20ಕ್ಕೆ ತೋರಣಗಲ್ಲಿನ ಜಿಂದಾಲ್ ಏರ್‌ಸ್ಟ್ರಿಪ್‌ನಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದು, ಮಧ್ಯಾಹ್ನ 12:15ಕ್ಕೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.
ಸಿದ್ದಿ ಟಿವಿ | ಕಂಪ್ಲಿ – ಬಳ್ಳಾರಿ
ಸುದ್ದಿ ಮತ್ತು ಮಾಹಿತಿಗಾಗಿ ನಮ್ಮ ವೆಬ್‌ಸೈಟ್‌ಗೆ ಭೇಟಿ ನೀಡಿ: www.sidditv.com
