Kampli : 10 ಮೀಟರ್ ಏರ್ ರೈಫಲ್ ಶೂಟಿಂಗ್ ಸ್ಪರ್ಧೆಯಲ್ಲಿ ಮೆಟ್ರಿ ಗ್ರಾಮದ ಚಿನ್ನರಾಜ ರಾಜ್ಯ ಮಟ್ಟಕ್ಕೆ ಆಯ್ಕೆ


 10 ಮೀಟರ್ ಏರ್ ರೈಫಲ್ ಶೂಟಿಂಗ್‌ನಲ್ಲಿ ಪ್ರಥಮ ಸ್ಥಾನ: ಮೆಟ್ರಿ ಗ್ರಾಮದ ಚಿನ್ನರಾಜ ರಾಜ್ಯ ಮಟ್ಟಕ್ಕೆ ಆಯ್ಕೆ

ಕಂಪ್ಲಿ, ಅ.2: ಕಲಬುರಗಿಯಲ್ಲಿ ನಡೆದ ಕಲಬುರಗಿ ವಿಭಾಗ ಮಟ್ಟದ ದಸರಾ ಸಿಎಂ ಕಪ್-2026 ಕ್ರೀಡಾಕೂಟದ 10 ಮೀಟರ್ ಏರ್ ರೈಫಲ್ ಶೂಟಿಂಗ್ ಸ್ಪರ್ಧೆಯಲ್ಲಿ ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ಮೆಟ್ರಿ ಗ್ರಾಮದ ಕ್ರೀಡಾಪಟು ಸಿ.ಡಿ. ಚಿನ್ನರಾಜ ಅವರು ಹಿರಿಯರ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ವಿಭಾಗ ಮಟ್ಟದ ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಚಿನ್ನರಾಜ ಅವರು ಪ್ರಥಮ ಸ್ಥಾನ ಪಡೆದು ಮೆಟ್ರಿ ಗ್ರಾಮ, ಕಂಪ್ಲಿ ತಾಲೂಕು ಹಾಗೂ ಬಳ್ಳಾರಿ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

ಅವರ ಈ ಸಾಧನೆಗೆ ಗ್ರಾಮದ ಮುಖಂಡರು, ಕ್ರೀಡಾಭಿಮಾನಿಗಳು, ಸ್ನೇಹಿತರು ಹಾಗೂ ಸಾರ್ವಜನಿಕರು ಅಭಿನಂದನೆ ಸಲ್ಲಿಸಿ, ರಾಜ್ಯ ಮಟ್ಟದ ಸ್ಪರ್ಧೆಯಲ್ಲಿಯೂ ಉತ್ತಮ ಸಾಧನೆ ಮಾಡುವಂತೆ ಶುಭ ಹಾರೈಸಿದ್ದಾರೆ.

SIDDI TV
ನೈತಿಕ ಹಾಗೂ ಸ್ವತಂತ್ರ ಮಾಧ್ಯಮ
Previous Post Next Post

Contact Form

f="https://unpkg.com/video.js/dist/video-js.css" rel="stylesheet">